ಮಂದಸೌರ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

7

ಮಂದಸೌರ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

Published:
Updated:
ಮಂದಸೌರ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಮಂದಸೌರ್‌ (ಮಧ್ಯಪ್ರದೇಶ): ಪ್ರತಿಭಟನೆ ವೇಳೆ ಪೊಲೀಸರು ಮತ್ತು ರೈತರ ನಡುವಿನ ಘರ್ಷಣೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮಂದಸೌರ್‌ಗೆ ತೆರಳುತ್ತಿದ್ದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮಧ್ಯಪ್ರದೇಶ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಪೊಲೀಸರು ಮತ್ತು ರೈತರ  ನಡುವಿನ ಘರ್ಷಣೆಯಲ್ಲಿ ಐವರು ರೈತರು ಮೃತಪಟ್ಟಿದ್ದರು.

ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ರಾಹುಲ್‌ ರೈತರೊಬ್ಬರ ಬೈಕ್‌ನಲ್ಲಿ ಮಂದಸೌರ್‌ಗೆ ತೆರಳುತ್ತಿದ್ದರು. ಈ ವೇಳೆ ಪೊಲೀಸರು ರಾಹುಲ್‌ ಗಾಂಧಿಯನ್ನು ವಶಕ್ಕೆ ಪಡೆದಿದ್ದಾರೆ.

ಮಂದಸೌರ್‌ನಲ್ಲಿ ಕರ್ಫ್ಯೂ  ಜಾರಿಯಲ್ಲಿದ್ದರು ರಾಹುಲ್‌ ಪ್ರಯಾಣ ಮಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿ ಪೊಲೀಸರು ರಾಹುಲ್‌ ಗಾಂಧಿಯನ್ನು ಬಂಧಿಸಿದ್ದಾರೆ.

ಇದೇ ವೇಳೆ ಮಂದಸೌರ್‌ಗೆ ತೆರಳಲು ಯತ್ನಸಿದ ಕಾಂಗ್ರೆಸ್‌ ಮುಖಂಡರಾದ ದಿಗ್ವಿಜಯ್‌ ಸಿಂಗ್‌, ಕಮಲ್‌ ನಾಥ್‌ ಹಾಗೂ ಜೆಡಿಯುನ ಶರಾದ್‌ ಪವಾರ್‌ ಅವರನ್ನು ಪೊಲೀಸರು ಬಂಧಿಸಿ ಸ್ಥಳೀಯ ವಿಶ್ರಾಂತಿ ಕೊಠಡಿಯಲ್ಲಿ ಇರಿಸಿದ್ದಾರೆ.

ರಾಹುಲ್‌ ಗಾಂಧಿ ಸೇರಿದಂತೆ ಬಂಧಿತ ನಾಯಕರುಗಳನ್ನು ಸಂಜೆ  ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಮಂದಸೌರ್‌ ನಲ್ಲಿ ಸಂಜೆ 4 ಗಂಟೆಯಿಂದ 6 ಗಂಟೆಯವರೆಗೂ ಕರ್ಫ್ಯೂ ಸಡಿಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry