ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನರಹಿತರಿಗೆ ನಿವೇಶನ ಕಲ್ಪಿಸಲು ಆಗ್ರಹ

ರೈತರ ಮೇಲೆ ಗೋಲಿಬಾರ್‌ಗೆ ಖಂಡನೆ: ರೈತ ಸಂಘ, ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ
Last Updated 8 ಜೂನ್ 2017, 11:37 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ನಿವೇಶನರಹಿತರಿಗೆ ನಿವೇಶನ ಕಲ್ಪಿಸಿ ಹಕ್ಕುಪತ್ರ ವಿತರಿಸಬೇಕು ಹಾಗೂ ತಾಲ್ಲೂಕು ಕಚೇರಿಯಲ್ಲಿ ಭ್ರಷ್ಟಾ ಚಾರ ತಡೆಗಟ್ಟಬೇಕು’ ಎಂದು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಜಮಾಯಿಸಿದ ಪ್ರತಿಭಟನಾ ಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾ ರದ ವಿರುದ್ಧ ಘೋಷಣೆ ಕೂಗಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ಮಾತನಾಡಿ, ಜಿಲ್ಲೆಯಲ್ಲಿ ಬಲಾಢ್ಯರು ಸಹಸ್ರಾರು ಎಕರೆ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನಲ್ಲಿ 16 ಸಾವಿರ ಅಸಲಿ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಾರೆ. ಒತ್ತುವರಿ ತೆರವು ತೆರವು ಗೊಳಿಸಿದರೆ ಅರ್ಜಿದಾರರೆಲ್ಲರಿಗೂ ಜಮೀನು ಕಲ್ಪಿಸಬಹುದು’ ಎಂದರು.

‘ಒತ್ತುವರಿ ಮಾಡಿ ಬಡವರು ಮನೆ ನಿರ್ಮಿಸಿಕೊಂಡಿದ್ದರೆ ಹಕ್ಕುಪತ್ರ ವಿತರಿಸುವ ಬದಲು ಒತ್ತುವರಿ ತೆರವು ಮಾಡಿಸುತ್ತಾರೆ. ಕೇಂದ್ರ ಸರ್ಕಾರ ನಿವೇಶನರಹಿತರಿಗೆ ನಿವೇಶನ ಹಾಗೂ ವಸತಿ ಕಲ್ಪಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಘು ಮಾತನಾಡಿ, 10 ವರ್ಷಗಳಿಂದ ಸಿಪಿಐ ವತಿಯಿಂದ ‘ಸೂರಿ ಗಾಗಿ ಸಮರ ಚಳುವಳಿ’ ನೆಡೆಸಲಾಗು ತ್ತಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳದಿ ದ್ದಲ್ಲಿ  ಮುಂದಿನ ದಿನಗಳಲ್ಲಿ ಕಚೇರಿಯ ಅವರ ಕೊಠಡಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸಿಪಿಐ ಮುಖಂಡರಾದ ರಾಧಾ ಸುಂದರೇಶ್, ಬಿ.ಅಮ್ಜದ್ ಇದ್ದರು.

ರೈತರ ಮೇಲೆ ಗೋಲಿಬಾರ್‌; ಖಂಡನೆ
ಚಿಕ್ಕಮಗಳೂರು: ‘
ಈರುಳ್ಳಿ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು, ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಮಧ್ಯಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಸಲಾಗಿದೆ’ ಎಂದು ಆರೋಪಿಸಿ ಜೆಡಿಎಸ್, ಸಿಪಿಐ, ಕನ್ನಡಸೇನೆ, ರಾಜ್ಯ ರೈತ ಸಂಘ, ಬಿಎಸ್‌ಪಿ, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಧ್ಯ ಪ್ರದೇಶ ಸರ್ಕಾರದ ಪ್ರತಿಕೃತಿ ದಹಿಸಿದರು. 

ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಅವರು ‘ಮಧ್ಯಪ್ರದೇಶ ಸರ್ಕಾರ ಪೋಲೀಸರ ಮೂಲಕ ಗೂಂಡಾಗಿರಿ ನಡೆಸುತ್ತಿದೆ. ರೈತನ ಮೇಲೆ ಲಾಠಿ ಬೀಸಿದ ಪೋಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು, ಮೃತಪಟ್ಟ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರ ₹ 25 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್.ದೇವರಾಜ್ ಮಾತನಾಡಿ, ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡಿ ರೈತರಿಗೆ ಬೆಂಬಲ ವ್ಯಕ್ತಪಡಿಸಬೇಕು. ಮಧ್ಯಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸಿಪಿಐ ಜಿಲ್ಲಾಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ಮಾತನಾಡಿ, ‘ರೈತರ ಮೇಲೆ ಗೋಲಿಬಾರ್ ಮಾಡಿರುವುದು ಯಾರು ಎಂಬುದು ಗೊತ್ತಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಬಿಜೆಪಿ ವಿರುದ್ಧ ಸಂಘಟನೆಗಳು ಒಗ್ಗೂಡಿ ಪ್ರತಿಭಟನೆ ನಡೆಸಬೇಕು’ ಎಂದರು.

ದಲಿತ ಸಂಘರ್ಷ ಸಮಿತಿ ಮಂಜುನಾಥ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್, ರೈತ ಸಂಘ ಮತ್ತು ಹಸಿರು ಸೇನೆಯ ಕೃಷ್ಣೇಗೌಡ, ಬಸವರಾಜು, ಗುರುಶಾಂತಪ್ಪ ಸಿಪಿಐ ಮುಖಂಡ ಬಿ.ಅಮ್ಜದ್ ಇದ್ದರು.

**

ಗೋಲಿಬಾರ್ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ‘ಮಧ್ಯ ಪ್ರದೇಶ ದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಗೋಲಿಬಾರ್ ನಡೆಸ  ಲಾಗಿದೆ’ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾ ಕಾರರು ಮಧ್ಯಪ್ರದೇಶ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ,‘ರೈತರ ಸಾಲಮನ್ನಾ ಹಾಗೂ ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಮಧ್ಯಪ್ರದೇಶದಲ್ಲಿ ಗೋಲಿಬಾರ್‌ ನಡೆಸಿದೆ ಎಂದು ಆರೋಪಿಸಿದರು.

‘ದೇಶದಲ್ಲಿ ಬಿಜೆಪಿ ಸರ್ಕಾರ ಜನರ ಆಹಾರ ಪದ್ಧತಿ ಮೇಲೆ ಗದಾಪ್ರಹಾರ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ  ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT