‘ಕಾಣದ ಕಡಲು’ಗೆ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ

7

‘ಕಾಣದ ಕಡಲು’ಗೆ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ

Published:
Updated:
‘ಕಾಣದ ಕಡಲು’ಗೆ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ

ಮಂಡ್ಯ: 2016ರ ‘ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ಗೆ ಚಿತ್ರದುರ್ಗದ ಲೇಖಕ ಎಚ್‌.ಬಿ.ಇಂದ್ರಕುಮಾರ್‌ ಅವರ ‘ಕಾಣದ ಕಡಲು’ ಕೃತಿ ಆಯ್ಕೆಯಾಗಿದೆ.

‘ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಈ ಪ್ರಶಸ್ತಿ ಕೊಡಲಾಗುತ್ತಿದೆ.  ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಜೂನ್‌ 10ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎ.ಎಂ.ರವಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry