ಜಂತಕಲ್‌ ಗಣಿಗಾರಿಕೆ: ಮಹೇಂದ್ರ ಜೈನ್‌ಗೆ ನಿರೀಕ್ಷಣಾ ಜಾಮೀನು

7

ಜಂತಕಲ್‌ ಗಣಿಗಾರಿಕೆ: ಮಹೇಂದ್ರ ಜೈನ್‌ಗೆ ನಿರೀಕ್ಷಣಾ ಜಾಮೀನು

Published:
Updated:
ಜಂತಕಲ್‌ ಗಣಿಗಾರಿಕೆ: ಮಹೇಂದ್ರ ಜೈನ್‌ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್‌ಗೆ  ಲೋಕಾಯುಕ್ತ ವಿಶೇಷ ನ್ಯಾಯಾಲಯ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಮಹೇಂದ್ರ ಜೈನ್‌ಗೆ ನೋಟಿಸ್‌ ಜಾರಿ ಮಾಡಿದ್ದರು.

‘ಮೈಸೂರು ಮಿನರಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ್ದರಿಂದ ಸರ್ಕಾರಕ್ಕೆ ₹ 219 ಕೋಟಿ ನಷ್ಟವಾಗಿದೆ’ ಎಂದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸುಪ್ರೀಂ ಕೋರ್ಟ್‌ಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ವರದಿಯಲ್ಲಿ ಹೆಸರಿಸಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್‌ ಇದೇ ಮಾರ್ಚ್‌ನಲ್ಲಿ ಎಸ್‌ಐಟಿಗೆ ನಿರ್ದೇಶನ ನೀಡಿತ್ತು.

ನಂತರ 13 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡ ಎಸ್‌ಐಟಿ ಅಧಿಕಾರಿಗಳು, ಐಎಎಸ್‌  ಅಧಿಕಾರಿ ಗಂಗಾರಾಂ ಬಡೇರಿಯಾ ಅವರನ್ನು ಬಂಧಿಸಿದೆ. ಇದೇ ಪ್ರಕರಣದಲ್ಲಿ  ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಈಗಾಗಲೇ ಮಧ್ಯಂತರ ಜಾಮೀನು ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry