ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಫಿಲ್ಟರ್‌ ಅಳವಡಿಕೆ

7

ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಫಿಲ್ಟರ್‌ ಅಳವಡಿಕೆ

Published:
Updated:
ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಫಿಲ್ಟರ್‌ ಅಳವಡಿಕೆ

ಬೆಂಗಳೂರು: ‘ಮಹದೇವಪುರ ಕ್ಷೇತ್ರದ ಮಂಡೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಅಳವಡಿಸಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆಂಪರಾಜ್ ತಿಳಿಸಿದರು.

ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

‘ಹುಸ್ಕೂರು ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡುತ್ತೇನೆ. ಅಲ್ಲದೆ, ಹೆಚ್ಚಿನ ಶಿಕ್ಷಣ ಪಡೆಯಲಾಗದ ಮಕ್ಕಳಿಗೆ ಸಹಾಯ ಮಾಡುತ್ತೇನೆ’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಗೌಡ ಮಾತನಾಡಿ, ‘ಮಂಡೂರು ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry