ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಕಾನೇರ್‌ನ ವಿಶ್ವವಿದ್ಯಾಲಯದ ವಾಣಿಜ್ಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪಠ್ಯದಲ್ಲಿ ಭಗವದ್ಗೀತೆ!

Last Updated 9 ಜೂನ್ 2017, 5:23 IST
ಅಕ್ಷರ ಗಾತ್ರ

ಜೈಪುರ: ರಾಜಸ್ತಾನದ ಬಿಕಾನೇರ್‌ನ ಮಾಹಾರಾಜ ಗಂಗಾ ಸಿಂಗ್ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ಪಠ್ಯದಲ್ಲಿ ಭಗವದ್ಗೀತೆಯನ್ನೂ ಅಳವಡಿಸಲಾಗಿದೆ.

ವಾಣಿಜ್ಯ ಪಠ್ಯದಲ್ಲಿ ಧಾರ್ಮಿಕ ಅಂಶಗಳನ್ನು ಅಳವಡಿಸಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದ್ದು, ರಾಷ್ಟ್ರೀಯತೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.

‘ಮ್ಯಾನೇಜ್‌ಮೆಂಟ್‌ ಸ್ಟಡೀಸ್’ ವಿಷಯದ ಪಠ್ಯವನ್ನು ಭಾರತೀಕರಣ ಮಾಡುವ ಹೆಸರಿನಲ್ಲಿ ಭಗವದ್ಗೀತೆಯ ಅಂಶ, ಕೌಟಿಲ್ಯ, ವಿವೇಕಾನಂದ ಮತ್ತು ಮಹಾತ್ಮಾ ಗಾಂಧಿ ಅವರ ಬಗೆಗಿನ ವಿವರಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಮಹಾಭಾರತ ಕಥೆಯಲ್ಲಿ ಬರುವ ಕುರುಕ್ಷೇತ್ರ ಯುದ್ಧಕ್ಕೂ ಮುನ್ನ ಶ್ರೀಕೃಷ್ಣ ಮತ್ತು ಅರ್ಜುನನ ನಡುವೆ ನಡೆಯುವ ಸಂಭಾಷಣೆಯ ಅಂಶವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಕೆಲ ವಿದೇಶಿ ಲೇಖಕರ ಪಠ್ಯವನ್ನು ಅಳಿಸಿ ಹಾಕಿ ಇವುಗಳನ್ನು ಸೇರ್ಪಡೆಗೊಳಿಸಲಾಗಿದೆ.

‘ವಿದೇಶಿ ಲೇಖಕರ ಪಠ್ಯವನ್ನು ತೆಗೆದುಹಾಕಿರುವುದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಓದುವಂಥ ಪಠ್ಯದಿಂದ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳು ಸ್ವೀಕರಿಸಿರುವಂಥ ಪಠ್ಯವನ್ನು ತೆಗೆದುಹಾಕಬಾರದು’ ಎಂದು ಕಾಂಗ್ರೆಸ್‌ ವಕ್ತಾರೆ ಅರ್ಚನಾ ಶರ್ಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT