ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ಚುನಾವಣೆ: ಪ್ರಧಾನಿ ಪಟ್ಟ ತೆರೆಸಾ ಮೇ ಕೈತಪ್ಪುವ ಸಾಧ್ಯತೆ

Last Updated 9 ಜೂನ್ 2017, 6:02 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಯಾವುದೇ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆಯಾಗಿದೆ.

ಸದ್ಯದ ವರದಿಗಳ ಪ್ರಕಾರ, ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ 311 ಸ್ಥಾನ ಗಳಿಸಿದ್ದು, ಪ್ರಮುಖ ಪ್ರತಿಸ್ಪರ್ಧಿ ಲೇಬರ್ ಪಕ್ಷ 260 ಸ್ಥಾನ ಪಡೆದಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. 650 ಸ್ಥಾನ ಹೊಂದಿರುವ ಬ್ರಿಟನ್‌ ಸಂಸತ್‌ನಲ್ಲಿ ಬಹುಮತಕ್ಕೆ 326 ಸಂಸದರ ಬೆಂಬಲ ಅಗತ್ಯವಿದೆ.

ಬಹುಮತ ಗಳಿಸುವ ವಿಶ್ವಾದೊಂದಿಗೆ ಅವಧಿಪೂರ್ವ ಚುನಾವಣೆಗೆ ಮುಂದಾಗಿದ್ದ ಬ್ರಿಟನ್ ಪ್ರಧಾನಿ ತೆರೆಸಾ ಮೇ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT