ದೇಶದ ಗಡಿ ಪ್ರದೇಶಗಳು ಹಿಂದೆಂದಿಗಿಂತಲೂ ಸುರಕ್ಷಿತವಾಗಿವೆ: ರಾಜನಾಥ್ ಸಿಂಗ್

7

ದೇಶದ ಗಡಿ ಪ್ರದೇಶಗಳು ಹಿಂದೆಂದಿಗಿಂತಲೂ ಸುರಕ್ಷಿತವಾಗಿವೆ: ರಾಜನಾಥ್ ಸಿಂಗ್

Published:
Updated:
ದೇಶದ ಗಡಿ ಪ್ರದೇಶಗಳು ಹಿಂದೆಂದಿಗಿಂತಲೂ ಸುರಕ್ಷಿತವಾಗಿವೆ: ರಾಜನಾಥ್ ಸಿಂಗ್

ಜೈಪುರ: ದೇಶದ ಗಡಿ ಪ್ರದೇಶಗಳೆಲ್ಲ ಹಿಂದೆಂದಿಗಿಂತಲೂ ಸುರಕ್ಷಿತವಾಗಿವೆ. ಅಕ್ರಮ ಒಳನುಸುಳುವಿಕೆ ತಡೆಯುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ‘ಮೋಡಿ–ಫೆಸ್ಟ್‌’ ಕಾರ್ಯಕ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಅನುಮತಿ ಇಲ್ಲದೆ ಯಾವೊಬ್ಬ ವ್ಯಕ್ತಿಯೂ ದೇಶದ ಗಡಿಯೊಳಕ್ಕೆ ಪ್ರವೇಶಿಸಲು ಸಾಧ್ಯವಾಗದಂತೆ ಮಾಡುವಷ್ಟರ ಮಟ್ಟಿನ ಭದ್ರತೆ ಒದಗಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಅವರು ಹೇಳಿದರು.

ಅಗತ್ಯವಿದ್ದಲ್ಲಿ ಭಾರತವು ಗಡಿಯಾಚೆಗೂ ದಾಳಿ ನಡೆಸಲಿದೆ ಎಂಬುದಕ್ಕೆ ಗಡಿನಿಯಂತ್ರಣ ರೇಖೆ ದಾಟಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ನಿರ್ದಿಷ್ಟ ದಾಳಿ ಸಾಕ್ಷಿ ಎಂದು ರಾಜನಾಥ್ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry