ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್

7

ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್

Published:
Updated:
ಒಂದು ವಾರದಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸುವೆ : ಎಚ್.ವಿಶ್ವನಾಥ್

ಮೈಸೂರು: ಒಂದು ವಾರದಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಅಡಗೂರು ಎಚ್.ವಿಶ್ವನಾಥ್ ಶುಕ್ರವಾರ ಕೆ.ಆರ್.ನಗರದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ತಿಳಿಸಿದರು.

ಯಾವ ಪಕ್ಷ ಸೇರಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ಅಡಗೂರು ಎಚ್.ವಿಶ್ವನಾಥ್ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಸಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ರಂಜಾನ್‌ ನಂತರ ತೀರ್ಮಾನ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈದ್‌ ಉಲ್‌ ಫಿತರ್ (ರಂಜಾನ್) ನಂತರ ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry