ಸದ್ಯದಲ್ಲೇ ಅಮೆರಿಕಕ್ಕೆ ಪ್ರಧಾನಿ ಮೋದಿ ?

7

ಸದ್ಯದಲ್ಲೇ ಅಮೆರಿಕಕ್ಕೆ ಪ್ರಧಾನಿ ಮೋದಿ ?

Published:
Updated:
ಸದ್ಯದಲ್ಲೇ ಅಮೆರಿಕಕ್ಕೆ ಪ್ರಧಾನಿ ಮೋದಿ ?

ವಾಷಿಂಗ್ಟನ್‌: ‘ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತಭವನ ಎದುರು ನೋಡುತ್ತಿದೆ’ ಎಂದು ಅಮೆರಿಕ ಹೇಳಿದೆ.

‘ಈ ತಿಂಗಳಾಂತ್ಯಕ್ಕೆ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದ್ದು ನಾವು ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದು ಅಮೆರಿಕ ಸರ್ಕಾರಿ ವಕ್ತಾರ ಹೀದರ್ ನೌರ್ಟ್ ಹೇಳಿದ್ದಾರೆ.

ಅಮೆರಿಕಕ್ಕೆ ಭೇಟಿ ನೀಡುವಂತೆ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಹ್ವಾನ ನೀಡಿದ್ದಾರೆ. ಆದರೆ, ಮೋದಿ-ಟ್ರಂಪ್ ಭೇಟಿಯ ದಿನಾಂಕದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry