‘ಮಂಗಳೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ ಕ್ರಮ’

7

‘ಮಂಗಳೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ ಕ್ರಮ’

Published:
Updated:
‘ಮಂಗಳೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ ಕ್ರಮ’

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗಾಗಿ 33 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕರಾವಳಿ, ಪ್ರವಾಸೋದ್ಯಮ ಸ್ಥಳಗಳ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದು ಅವಶ್ಯಕ. ಇದರಿಂದ ಅರಬ್‌ ದೇಶಗಳಿಗೆ ಸಂಚರಿಸುವವರಿಗೆ ಅನುಕೂಲವಾಗಿದೆ ಎಂದರು.

ಈ ವಿಮಾನ ನಿಲ್ದಾಣ ರಾಜ್ಯ ಸರ್ಕಾರದ ಹಿಡಿತದಲ್ಲಿ ಇಲ್ಲ. ಏನೇ ಕಾಮಗಾರಿ ಕೈಗೊಳ್ಳಬೇಕಾದರೂ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮತಿ ಪಡೆಯುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ತಾಂತ್ರಿಕ ವರದಿ ಕೇಳಿದ್ದೇವೆ: ‘ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಇದೇ ತಿಂಗಳ 1ರಂದು ಸಭೆ ನಡೆಸಿದ್ದಾರೆ. ಅವರು ನಾಲ್ಕು ರೀತಿಯ ಶಿಫಾರಸುಗಳನ್ನು ಮಾಡಿದ್ದು, ಪ್ರತಿ ಯೋಜನೆಗೂ ₹ 4,000 ಕೋಟಿಗೂ ಅಧಿಕ ಖರ್ಚು ಬರುತ್ತದೆ. ಅದಕ್ಕಾಗಿ ಬೇರೆ ರೀತಿಯ ತಾಂತ್ರಿಕ ವರದಿ ಕೇಳಲಾಗಿದೆ’ ಎಂದು ಸಚಿವರು ವಿವರಿಸಿದರು.

* ಉಡುಪಿ– ಮಂಗಳೂರು ಮಧ್ಯೆ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಜಾಗ ಹುಡುಕಾಟ ಆರಂಭವಾಗಿದೆ

– ಆರ್.ವಿ. ದೇಶಪಾಂಡೆ, ಕೈಗಾರಿಕಾ ಸಚಿವ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry