ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ: ಇಂಜಿನಿಯರ್ ಸಾವು

7

ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ: ಇಂಜಿನಿಯರ್ ಸಾವು

Published:
Updated:
ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ: ಇಂಜಿನಿಯರ್ ಸಾವು

ನವದೆಹಲಿ: ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಒಬ್ಬ ಇಂಜಿನಿಯರ್ ಮೃತಪಟ್ಟ ಘಟನೆ ಬದರಿನಾಥದ ಬಳಿ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.‌

ಹೆಲಿಕಾಪ್ಟರ್‌ನಲ್ಲಿ ಸಿಬ್ಬಂದಿ ಹೊರತುಪಡಿಸಿ ಐವರು ಪ್ರಯಾಣಿಕರಿದ್ದರು. ಅವರೆಲ್ಲ ಸುರಕ್ಷಿತರಾಗಿದ್ದಾರೆ.

ಮುಂಬೈನ ಖಾಸಗಿ ಕಂಪೆನಿಗೆ ಸೇರಿದ ‘ಅಗಸ್ಟಾ 119’ ಹೆಲಿಕಾಪ್ಟರ್ ಬದರಿನಾಥದಿಂದ ಹರಿದ್ವಾರಕ್ಕೆ ಯಾತ್ರಿಗಳನ್ನು ಕರೆದೊಯ್ಯುತ್ತಿತ್ತು. ಬದರಿನಾಥದಿಂದ ಪ್ರಯಾಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry