ಅನಿರ್ದಿಷ್ಟಾವಧಿ ನಿರಶನ ಆರಂಭಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

7

ಅನಿರ್ದಿಷ್ಟಾವಧಿ ನಿರಶನ ಆರಂಭಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

Published:
Updated:
ಅನಿರ್ದಿಷ್ಟಾವಧಿ ನಿರಶನ ಆರಂಭಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ರೈತರ ಪ್ರತಿಭಟನೆ, ಹಿಂಸಾಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಉದ್ದೇಶದೊಂದಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಅನಿರ್ದಿಷ್ಟಾವಧಿ ನಿರಶನ ಆರಂಭಿಸಿದ್ದಾರೆ.

ಇದಕ್ಕೂ ಮುನ್ನ ಅವರು ‘ನಾನು ವಲ್ಲಭ ಭವನದಲ್ಲಿರುವ ಕಚೇರಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಬದಲಿಗೆ ಬಿಎಚ್‌ಇಎಲ್‌ ಕ್ಯಾಂಪಸ್‌ನಲ್ಲಿರುವ ದಸ್ಸೆರಾ ಮೈದಾನದಲ್ಲಿ ನಿರಶನ ಆರಂಭಿಸಲಿದ್ದೇನೆ. ಹಿಂಸಾಚಾರದಲ್ಲಿ ನಿರತರಾಗಿರುವವರೆಲ್ಲ ಹಿಂಸೆ ಬಿಟ್ಟು ಮಾತುಕತೆಗೆ ಬರುವಂತೆ ಮನವಿ ಮಾಡುತ್ತಿದ್ದೇನೆ’ ಎಂದು ಹೇಳಿಕೆ ನೀಡಿದ್ದರು.

‘ಪ್ರತಿಭಟನಾಕಾರರು ಶಾಂತಿ ಕಾಪಾಡಬೇಕು. ಕಲ್ಲು ಎಸೆಯುತ್ತಿರುವವರು ಮತ್ತು ಅವರಿಗೆ ಕಲ್ಲಿ ನೀಡುತ್ತಿರುವವರು ಎಲ್ಲರೂ ನಮ್ಮವರೇ. ಮಾತುಕತೆಯಿಂದ ಮಾತ್ರ ಎಲ್ಲದಕ್ಕೂ ಪರಿಹಾರ ಕಂಡುಕೊಳ್ಳುವುದು ಸಾಧ್ಯ. ಸರ್ಕಾರದ ಜತೆ ಮಾತುಕತೆ ನಡೆಸಬೇಕೆಂದು ಬಯಸುವ ಎಲ್ಲರಿಗೂ ಸ್ವಾಗತ’ ಎಂದು ಚೌಹಾಣ್ ಹೇಳಿದ್ದಾರೆ.

ಮುಖ್ಯಮಂತ್ರಿಯವರು ಮಾತುಕತೆಗೆ ಆಹ್ವಾನಿಸಿರುವುದನ್ನು ಕೃಷಿಕರ ಸಂಘಟನೆ ಭಾರತೀಯ ಕಿಸಾನ್ ಮಜ್ದೂರ್ ಸಂಘ ಸ್ವಾಗತಿಸಿದೆ. ಸಾಲ ಮನ್ನಾ ಹಾಗೂ ಬೆಳೆಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಮಧ್ಯಪ್ರದೇಶದ ಹಲವೆಡೆ ಜೂನ್‌ 1ರಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕೆಲ ದಿನಗಳ ಹಿಂದೆ ಹಿಂಸಾಚರಕ್ಕೆ ತಿರುಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry