ಮ್ಯಾನ್‌ಹೋಲ್‌ ಸ್ವಚ್ಛತೆಗೆ ಪೌರಕಾರ್ಮಿಕರ ಬಳಕೆ

7
ನಗರಸಭೆಯ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಮ್ಯಾನ್‌ಹೋಲ್‌ ಸ್ವಚ್ಛತೆಗೆ ಪೌರಕಾರ್ಮಿಕರ ಬಳಕೆ

Published:
Updated:
ಮ್ಯಾನ್‌ಹೋಲ್‌ ಸ್ವಚ್ಛತೆಗೆ ಪೌರಕಾರ್ಮಿಕರ ಬಳಕೆ

ಚಿಂತಾಮಣಿ: ‘ನಗರಸಭೆಯ ಅಧಿಕಾರಿಗಳು ಒಳಚರಂಡಿ ಮ್ಯಾನ್‌ಹೋಲ್‌ಗಳನ್ನು ಪೌರಕಾರ್ಮಿಕರಿಂದ ಸ್ವಚ್ಛಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ವಿ.ನರಸಿಂಹಪ್ಪ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

‘ರಾಜ್ಯದ ಹಲವಾರು ಕಡೆಗಳಲ್ಲಿ ಕಾರ್ಮಿಕರು ಮ್ಯಾನ್‌ಹೋಲ್‌ಗಳಲ್ಲಿ ಇಳಿದು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದರೂ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಮಿಕರ ಕೈಗಳಿಂದಲೇ ಸ್ವಚ್ಛಗೊಳಿಸುತ್ತಿದ್ದಾರೆ’ ಎಂದು ದೂರಿದ್ದಾರೆ.

‘ನಗರದ ಎಂ.ಜಿ.ರಸ್ತೆಯ ಅಂಬೇಡ್ಕರ್‌ ವೃತ್ತದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಪೌರಕಾರ್ಮಿಕರು, ತಮ್ಯಾನ್‌ಹೋಲ್‌ನ್ನು ಕಂಬಿ ಮತ್ತು ಕೈಗಳಿಂದಲೇ ಸ್ವಚ್ಛಗೊಳಿಸುತ್ತಿರುವ ಚಿತ್ರವನ್ನು ದೂರಿನೊಂದಿಗೆ ಸಲ್ಲಿಸಿದ್ದಾರೆ. ನಗರಸಭೆಯ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

‘ಸರ್ಕಾರ ಹಲವಾರು ಬಾರಿ ಆದೇಶಗಳನ್ನು ಹೊರಡಿಸಿ, ಯಾವುದೇ ಕಾರಣಕ್ಕೂ ಯುಜಿಡಿ ಮ್ಯಾನ್‌ಹೋಲ್‌ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸಬಾರದು. ಯಂತ್ರಗಳಿಂದ ಮಾತ್ರ ಸ್ವಚ್ಛಗೊಳಿಸಬೇಕು ಎಂದು ತಿಳಿಸಿದೆ. ಅಧಿಕಾರಿಗಳು ಸರ್ಕಾರಿ ಆದೇಶಗಳಿಗೆ ಕಿಮ್ಮತ್ತು ನೀಡದೆ ಕಾರ್ಮಿಕರಿಂದಲೇ ಸ್ವಚ್ಛಗೊಳಿಸುತ್ತಿದ್ದಾರೆ’ ಅವರು ಹರಿಹಾಯ್ದಿದ್ದಾರೆ.

‘ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry