ಕೇಂದ್ರ ಕೃಷಿ ಸಚಿವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ

7

ಕೇಂದ್ರ ಕೃಷಿ ಸಚಿವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ

Published:
Updated:
ಕೇಂದ್ರ ಕೃಷಿ ಸಚಿವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಎಸೆತ

ಭುವನೇಶ್ವರ: ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಕಾರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸದ ಘಟನೆ ಇಲ್ಲಿನ ಸರ್ಕಾರಿ ಅತಿಥಿಗೃಹದ ಬಳಿ ನಡೆದಿದೆ.

ಜತ್ನಿಯಲ್ಲಿ ನಡೆಯಲಿರುವ ‘ಸಬ್‌ ಕಾ ಸಾತ್ ಸಬ್‌ ಕಾ ವಿಕಾಸ್’ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಸಚಿವರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ಘಟನೆಯನ್ನು ಸಚಿವರು ಅಲ್ಲಗಳೆದಿದ್ದಾರೆ.

ಮಧ್ಯಪ್ರದೇಶದಲ್ಲಿ ಆರು ಮಂದಿ ರೈತರು ಪೊಲೀಸರ ಗುಂಡೇಟಿಗೆ ಬಲಿಯಾಗಿರುವುದಕ್ಕೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯುವ ಕಾಂಗ್ರೆಸ್‌ನ ಒಡಿಶಾ ಘಟಕದ ಅಧ್ಯಕ್ಷರೂ ಸೇರಿ ಆರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶದಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರಿದ್ದ ಸಂದರ್ಭದಲ್ಲೇ, ಕೆಲ ದಿನಗಳ ಹಿಂದೆ ಬಿಹಾರದ ಮೊತಿಹರಿಯಲ್ಲಿ ಯೋಗಗುರು ಬಾಬಾ ರಾಮ್‌ದೇವ್ ಆಯೋಜಿಸಿದ್ದ ಯೋಗ ಶಿಬಿರವೊಂದರಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry