ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಹಿಳಾ ಸೈನಿಕರ ಬಳಕೆ: ಬಿಪಿನ್‌ ರಾವತ್‌

ಗಲಭೆ ನಿಯಂತ್ರಣಕ್ಕೆ ಮಹಿಳಾ ಬಲ
Last Updated 10 ಜೂನ್ 2017, 11:12 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ‘ಕಾಶ್ಮೀರದಂತಹ ಪ್ರದೇಶಗಳಲ್ಲಿ ಮಹಿಳಾ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪುರುಷ ಯೋಧರಿಗೆ ಕಷ್ಟವಾಗುತ್ತಿದೆ. ಇಂತಹ ಕಡೆಗಳಲ್ಲಿ ಮಹಿಳಾ ಸೈನಿಕರನ್ನು ಬಳಸಿಕೊಳ್ಳಲಾಗುವುದು’ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.

ಡೆಹ್ರಾಡೂನ್‌ನ ಭಾರತೀಯ ಸೇನಾ ಅಕಾಡೆಮಿಯಲ್ಲಿ (ಐಎಂಎ) ತರಬೇತಿ ಪಡೆದ ಯೋಧರು ಶನಿವಾರ ನಡೆಸಿದ ನಿರ್ಗಮಿತ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

‘ಕೆಲ ಸಂದರ್ಭಗಳಲ್ಲಿ ಸೇನೆಗೆ ಎದುರಾಗಿ ಮಹಿಳಾ ಪ್ರತಿಭಟನಾಕಾರರು ಬರುತ್ತಾರೆ. ಅವರನ್ನು ನಿಯಂತ್ರಿಸಲು ಮಹಿಳಾ ಸೈನಿಕರನ್ನು ಬಳಸಿಕೊಳ್ಳಲಾಗುವುದು’ ಎಂದು ರಾವತ್‌ ಹೇಳಿದ್ದಾರೆ.

‘ಮಹಿಳೆಯರಿಗೆ ಯುದ್ಧರಂಗದಲ್ಲಿ ಜವಾಬ್ದಾರಿಗಳನ್ನು ನಿಭಾಯಿಸುವ ಅವಕಾಶ ನೀಡಲಾಗುವುದು. ಪ್ರಸ್ತುತ ಪುರುಷರಿಗೆ ಸೀಮಿತವಾಗಿರುವ ಈ ವಲಯಕ್ಕೆ ಮಹಿಳೆಯರನ್ನು ಸೇರಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ’ ಎಂದು ರಾವತ್‌ ಇತ್ತೀಚೆಗೆ ಹೇಳಿದ್ದರು.

ಸದ್ಯ ಸೇನೆಯ ವೈದ್ಯಕೀಯ, ಕಾನೂನು, ಶಿಕ್ಷಣ, ಎಂಜಿನಿಯರಿಂಗ್‌ ವಿಭಾಗಗಳಲ್ಲಿ ಮಾತ್ರ ಮಹಿಳೆಯರ ನೇಮಕಾತಿಗೆ ಅವಕಾಶ ಇದೆ.

ಇದನ್ನೂ ಓದಿ...
ಯುದ್ಧರಂಗದಲ್ಲಿ ಮಹಿಳೆಯರಿಗೆ ಅವಕಾಶ: ರಾವತ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT