ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಕೋಟಿ ಅನುದಾನಕ್ಕೆ ಬೇಡಿಕೆ: ಆರತಿ ಕೃಷ್ಣ

Last Updated 10 ಜೂನ್ 2017, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು:  ‘ಅನಿವಾಸಿ ಭಾರತೀಯರಿಗೆ ಹೊಸ ಯೋಜನೆಗಳನ್ನು ರೂಪಿಸಲಾಗಿದ್ದು,  ಅವುಗಳನ್ನು ಕಾರ್ಯಗತಗೊಳಿಸಲು ₹ 10 ಕೋಟಿ ಅನುದಾನಕ್ಕೆ ಬೇಡಿಕೆ ಇಡಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ  ₹ 2 ಕೋಟಿ ಬಿಡುಗಡೆ ಮಾಡಿದೆ’ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಿಂದ ಕೊಲ್ಲಿ ರಾಷ್ಟ್ರಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿದ್ದು, ಅನಿವಾಸಿ ಭಾರತೀಯರಿಗೆ ‘ಎನ್‌ಆರ್‌ಕೆ’ ಗುರುತಿನ ಚೀಟಿ ನೀಡಲಾಗುತ್ತಿದೆ. ಬ್ಯಾಂಕ್ ಖಾತೆ ತೆರೆಯಲು ಈ ಕಾರ್ಡ್ ಉಪಯೋಗವಾಗಲಿದೆ ಎಂದರು. 

ಆ ದೇಶಗಳಲ್ಲಿ ಒಟ್ಟು 2.9 ಲಕ್ಷ ಅನಿವಾವಾಸಿ ಭಾರತೀಯರಿಗಾಗಿ ರಾಜ್ಯ ಸರ್ಕಾರದ ವತಿಯಿಂದ ಕೌಶಲ ಅಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.

ವಿದೇಶಕ್ಕೆ ಉದ್ಯೋಗಕ್ಕೆ ತೆರಳುವವರು ‘ಈ –ಮೈಗ್ರೆಟ್’ ವೆಬ್ ವಿಳಾಸದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಇದರಿಂದ ವಿದೇಶಗಳಲ್ಲಿ ತೊಂದರೆಗೆ ಒಳಗಾದರೆ ನೆರವು ಪಡೆದುಕೊಳ್ಳಲು ಅನುಕೂಲವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT