‘ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’

7

‘ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’

Published:
Updated:
‘ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’

ಬೆಂಗಳೂರು: ‘ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರು ಪ್ರಚಾರಕ್ಕಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಅವರು ಟೀಕಿಸಿದರು.

ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಎನ್‌ಆರ್‌ಐ ಬಡಾವಣೆಯ ಕಲ್ಕರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಧಿಕಾರಕ್ಕೆ ಬರುವ ಮುಂಚೆ ನೀಡಿದ ಅಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಶಾಂತಿ ಕದಡುವ ಕೆಲಸವನ್ನು ಆ ಪಕ್ಷದ ಮುಖಂಡರು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ನಗರದ ಸಂಸದರು ಕೇವಲ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಿಮೀತವಾಗಿದ್ದಾರೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಅಭಿವೃದ್ಧಿಕಾರ್ಯ ಕೈಗೊಂಡಿಲ್ಲ. ನಗರದ ಅಭಿವೃದ್ಧಿಗೆ ಅವರ  ಸಾಧನೆ ಶೂನ್ಯ’ ಎಂದು ಟೀಕಿಸಿದರು.

ಶಾಸಕ ಬೈರತಿ ಬಸವರಾಜು, ‘ಸರ್ಕಾರ ಜನಹಿತ ಕಾಪಾಡುವಲ್ಲಿ ಸಕ್ರಿಯವಾಗಿದೆ. ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry