ಶಾಲಾ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

7

ಶಾಲಾ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

Published:
Updated:
ಶಾಲಾ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

ಬೆಂಗಳೂರು: ಬಾಂಧವ ಸಂಸ್ಥೆ ವತಿಯಿಂದ ಜಯನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸರ್ಕಾರಿ ಶಾಲೆಯ 100 ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ಗಳನ್ನು ವಿತರಿಸಲಾಯಿತು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 1,000 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. 2,000 ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು.

ಶಾಸಕ ಬಿ.ಎನ್. ವಿಜಯ ಕುಮಾರ್, ‘ಈ ಹಿಂದೆ ಬಡ ಮಕ್ಕಳಿಗೆ ಶಿಕ್ಷಣ ಗಗನಕುಸುಮವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಶಿಕ್ಷಣಕ್ಕಾಗಿ ಅನೇಕ ಸಂಘ–ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತಿವೆ. ಇದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

ಬಾಂಧವ ಸಂಸ್ಥೆಯ ಅಧ್ಯಕ್ಷ ಎನ್. ನಾಗರಾಜು, ‘ಬಡತನದಿಂದಾಗಿ ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಂತಹವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು­

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry