ಕದನವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ: ಗಡಿಯಲ್ಲಿ ಗುಂಡಿನ ಚಕಮಕಿ

7

ಕದನವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ: ಗಡಿಯಲ್ಲಿ ಗುಂಡಿನ ಚಕಮಕಿ

Published:
Updated:
ಕದನವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ: ಗಡಿಯಲ್ಲಿ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎರಡು ಕಡೆ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.

ಭೀಮ್‌ಬೆರ್ ಗಾಲಿ ಪ್ರದೇಶದಲ್ಲಿ ಬೆಳಿಗ್ಗೆ 9.45ಕ್ಕೆ ಮತ್ತು ರಾಮಗಢ ಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆಗೆ ಪಾಕಿಸ್ತಾನದ ಪಡೆಗಳು ಗುಂಡಿನ ದಾಳಿ ಆರಂಭಿಸಿವೆ. ಭಾರತೀಯ ಸೇನೆಯೂ ಪ್ರತಿ ದಾಳಿ ಆರಂಭಿಸಿದೆ. ಗುಂಡಿನ ಚಕಮಕಿ ಮುಂದುವರಿದಿದೆ. ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಶನಿವಾರವೂ ಕಷ್ಣಾ ಘಾಟಿ ಪ್ರದೇಶದಲ್ಲಿ ಪಾಕಿಸ್ತಾನದ ಪಡೆಗಳು ಕದನವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry