ಗುಡ್ಡ ಕುಸಿತ: ‌ಇಬ್ಬರು ಮಕ್ಕಳು ಸಾವು, ಬಾಲಕಿ ಮಣ್ಣಿನಡಿ ಸಿಲುಕಿರುವ ಶಂಕೆ

7

ಗುಡ್ಡ ಕುಸಿತ: ‌ಇಬ್ಬರು ಮಕ್ಕಳು ಸಾವು, ಬಾಲಕಿ ಮಣ್ಣಿನಡಿ ಸಿಲುಕಿರುವ ಶಂಕೆ

Published:
Updated:
ಗುಡ್ಡ ಕುಸಿತ: ‌ಇಬ್ಬರು ಮಕ್ಕಳು ಸಾವು, ಬಾಲಕಿ ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಭಾನುವಾರ ಬೆಳಗ್ಗಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಮಟಾ ತಾಲ್ಲೂಕಿನ ತಂಡ್ರಕುಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದು ಮನೆ ಮೇಲೆ ಬೃಹತ್ ಬಂಡೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಏಳನೇ ತರಗತಿ ಓದುತ್ತಿರುವ ಬಾಲಕಿಯೊಬ್ಬಳು ಮಣ್ಣಿನಡಿ ಸಿಲುಕಿಕೊಂಡಿದ್ದಾಳೆ ಎನ್ನಲಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ರಕ್ಷಣೆ ಮತ್ತು ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಕುಮಟಾ ಅಂತ್ರವಳ್ಳಿ ಮಾರ್ಗದಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry