ದಕ್ಷಿಣ ಆಫ್ರಿಕಾ ಮಣಿಸಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

7

ದಕ್ಷಿಣ ಆಫ್ರಿಕಾ ಮಣಿಸಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

Published:
Updated:
ದಕ್ಷಿಣ ಆಫ್ರಿಕಾ ಮಣಿಸಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಕೆನ್ನಿಂಗ್ಟನ್‌ ಓವೆಲ್‌, ಲಂಡನ್‌: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಗೆಲುವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವ ಮೂಲಕ ಟೀಮ್‌ ಇಂಡಿಯಾ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಟಾಸ್‌ ಗೆದ್ದಿದ್ದ ಭಾರತ ಫೀಲ್ಡಿಂಗ್‌ ಆರಿಸಿಕೊಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಆಟಗಾರರು 44.3 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 191 ರನ್‌ ಕಲೆಹಾಕಿದ್ದರು.

192 ರನ್‌ಗಳ ಗೆಲುವಿನ ಗುರಿಯ ಬೆನ್ನತ್ತಿದ ಭಾರತ 38 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 193 ರನ್‌ ಗಳಿಸಿ ಗೆಲುವನ್ನು ತನ್ನದಾಗಿಸಿಕೊಂಡಿತು.

ಶಿಖರ್‌ ಧವನ್‌ 83 ಬಾಲ್‌ಗಳಲ್ಲಿ 78 ರನ್‌ ಗಳಿಸಿ ಔಟಾದರು. ನಾಯಕ ವಿರಾಟ್‌ ಕೊಹ್ಲಿ 101 ಬಾಲ್‌ಗಳಲ್ಲಿ 76 ರನ್‌ ಗಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry