ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಯಂ’ ಯೋಜನೆ: 2 ಸಾವಿರ ಆನ್‌ಲೈನ್‌ ಕೋರ್ಸ್‌ಗಳಿಗೆ ಅವಕಾಶ

Last Updated 11 ಜೂನ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಸ್ವಯಂ’ ಯೋಜನೆ ಅಡಿಯಲ್ಲಿ 2 ಸಾವಿರ ಆನ್‌ಲೈನ್‌ ಕೋರ್ಸ್‌ಗಳ ಕಲಿಕೆಗೆ  ಅವಕಾಶ ನೀಡುವ ಗುರಿ ಇದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.

ನವದೆಹಲಿಯ ಐಐಟಿಯಲ್ಲಿ ನಡೆದ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತವೇ ಅಭಿವೃದ್ಧಿಪಡಿಸಿರುವ ವ್ಯವಸ್ಥೆ ಅಡಿಯಲ್ಲಿ ಈಗ 380 ಆನ್‌ಲೈನ್‌ ಕೋರ್ಸ್‌ಗಳನ್ನು ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ.  ಮುಂದಿನ ಒಂದು ವರ್ಷದ ಒಳಗಾಗಿ ಇದನ್ನು 2 ಸಾವಿರ ಕೋರ್ಸ್‌ಗಳಿಗೆ  ವಿಸ್ತರಿಸಲಾಗುವುದು’ ಎಂದರು.

ಕಳೆದ ವರ್ಷ ಆರಂಭಿಸಿದ ಈ ಅನುಕೂಲಕರ ವ್ಯವಸ್ಥೆಯಿಂದ ಈಗಾಗಲೇ 60 ಸಾವಿರ ವಿದ್ಯಾರ್ಥಿಗಳು ಕೋರ್ಸ್‌ ಮುಗಿಸಿದ್ದಾರೆ. ಇದರಿಂದ ಯಾವುದೇ ಸ್ಥಳದಲ್ಲಿ ಕೂತು ಜ್ಞಾನವನ್ನು ಪಡೆಯಬಹುದು.

9ರಿಂದ 12ರ ತನಕ ಶಾಲಾ ಹಂತ, ಪದವಿ ಪೂರ್ವ ಹಾಗೂ ಸ್ನಾತಕೋತರ ಹಂತದಲ್ಲಿ ಉನ್ನತ ಮಟ್ಟದ ಕೋರ್ಸ್‌ಗಳನ್ನು ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT