‘ಸಾಲ ಮನ್ನಾ ಮಾಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ’

7

‘ಸಾಲ ಮನ್ನಾ ಮಾಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ’

Published:
Updated:
‘ಸಾಲ ಮನ್ನಾ ಮಾಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ’

ಹೊಸಕೋಟೆ:‘ರೈತರ ಸಾಲವನ್ನು ಜುಲೈ 10ರೊಳಗೆ ಮನ್ನಾ ಮಾಡದಿದ್ದರೆ 5 ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಜನಸಂಪರ್ಕ ಅಭಿಯಾನ ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತರ ಪ್ರದೇಶ, ಮಹಾರಾಷ್ಟ್ರದ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಿವೆ. ರಾಜ್ಯದಲ್ಲಿ ಮನ್ನಾ ಮಾಡಲು ಆಗುವುದಿಲ್ಲವೇ? ಈ ವಿಷಯದ ಕುರಿತು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರೈತರ ಸಭೆಗಳನ್ನು ನಡೆಸುತ್ತೇವೆ’ ಎಂದರು.

‘ನೀರಾವರಿ ಯೋಜನೆಯನ್ನು ಕಡೆಗಣಿಸಲಾಗಿದೆ. ಮರಳು ಮಾಫಿಯಾ ಹೆಚ್ಚಾಗಿದೆ’ ಎಂದು ದೂರಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರರಹಿತ, ಹಗರಣಮುಕ್ತವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಹೇಳಿದರು.

ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ‘ರಾಜ್ಯ ಸರ್ಕಾರವು ಹಿಂದುಳಿದ, ದಲಿತರ ಏಳಿಗೆಗೆ ಯಾವುದೇ ಕೆಲಸ ಮಾಡಿಲ್ಲ. ಪೊಳ್ಳು ಭರವಸೆ ನೀಡುವುದಕ್ಕೆ ಸೀಮಿತವಾಗಿದೆ’ ಎಂದು ದೂರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry