ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ

7

ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ

Published:
Updated:
ಬಂದ್‌ ಕರೆಗೆ ಬೆರಳೆಣಿಕೆ ಬೆಂಬಲ

ಬೆಂಗಳೂರು: ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಮತ್ತು ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್‌’ಗೆ ಬೆರಳೆಣಿಕೆಯಷ್ಟು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.ಬಸ್‌ ಸಂಚಾರ ಎಂದಿನಂತೆ ಇರಲಿದೆ. ಪೆಟ್ರೋಲ್‌ ಬಂಕ್‌ಗಳು, ಶಾಲಾ ಕಾಲೇಜುಗಳು, ಕೋರ್ಟ್‌ ಕಲಾಪಗಳು ನಡೆಯಲಿವೆ. ಬ್ಯಾಂಕ್‌, ಸರ್ಕಾರಿ ಕಚೇರಿಗಳಿಗೆ  ರಜೆ ಇಲ್ಲ. ಬೆಂಗಳೂರಿನಲ್ಲಿ ಟ್ಯಾಕ್ಸಿಗಳು, ಆಟೋ ಸಂಚಾರ ಇರಲಿದೆ.

ಬೆಂಬಲ ಇಲ್ಲ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರ ಸಂಘ, ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಕಾರ್ಖಾನೆಗಳ ಕಾರ್ಮಿಕ ಸಂಘಟನೆಗಳು, ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ,  ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘ ಬಂದ್‌ನಿಂದ ಹೊರಗುಳಿಯಲಿವೆ.

ಬೆಂಬಲ: ಬಂದ್‌ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಲಾರಿ ಮಾಲೀಕರ ಸಂಘ ಬೆಂಬಲಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry