ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌ಗೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ

Last Updated 12 ಜೂನ್ 2017, 6:22 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್‌’ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೋಲಾರ ಜಿಲ್ಲೆಯಾದ್ಯಂತ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

‌ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಮತ್ತು ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸೋಮವಾರ ಬಂದ್‌ಗೆ ಕರೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಹಾಗೂ ಮೆಟ್ರೊ ರೈಲು ಸಂಚಾರ ಎಂದಿನಂತೆ ನಡೆಯುತ್ತಿದೆ.

ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಬಸ್ ಸಂಚಾರ ವ್ಯತ್ಯಯವಾಗಿದೆ. ನವಲಗುಂದದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಅಂಗಡಿ ಮುಂಗಟ್ಟೆಗಳು ಮುಚ್ಚಿವೆ.

ವ್ಯಾಪಕ ಬೆಂಬಲ

ಕೋಲಾರ: ಬಂದ್ ಕರೆಗೆ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರೈತ ಸಂಘ ಮತ್ತು ಹಸಿರು ಸೇನೆ, ನೀರಾವರಿ ಹೋರಾಟ ಸಮಿತಿ ಸದಸ್ಯರು ಬಂದ್ ಬೆಂಬಲಿಸಿ ಜಿಲ್ಲಾ ಕೇಂದ್ರದಲ್ಲಿ ಮುಂಜಾನೆಯೇ ಬೀದಿಗಿಳಿದು ಹೋರಾಟ ನಡೆಸಿದರು.

ಕೆಎಸ್ಆರ್ ಟಿಸಿ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ, ಬಸ್‌ಗಳ ಚಕ್ರದ ಗಾಳಿ ತೆಗೆದು ಹೋರಾಟಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಿದ್ದ ದೃಶ್ಯ ಹಲವೆಡೆ ಕಂಡುಬಂತು.

ಕೆಲ ಸಂಘಟನೆಗಳ ಸದಸ್ಯರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಟೈರ್‌ ಸುಟ್ಟು ಪ್ರತಿಭಟನೆ

ಹುಬ್ಬಳ್ಳಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹೊಸೂರು ಬಸ್ ಡಿಪೊ ಮುಂಭಾಗ ಹೋಗುತ್ತಿದ್ದ ವಾಹನಗಳನ್ನು ತಡೆದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಟೈರ್‌ಗಳನ್ನು ಸುಟ್ಟು ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.

ಬಂದ್ ಹಿನ್ನೆಲೆಯಲ್ಲಿ ಹಳೇ ಬಸ್‌ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡು ಬಣಗುಡುತ್ತಿತ್ತು.

ಬಂದ್ ಹಿನ್ನಲೆ ನವಲಗುಂದದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಅಂಗಡಿ ಬಂದ್‌
ಚಿಕ್ಕಮಗಳೂರು:
ಬಂದ್ ಅಂಗವಾಗಿ ನಗರದ ಎಂಜಿ ರಸ್ತೆ, ಐಜಿ ರಸ್ತೆ ಸೇರಿದಂತೆ ವಿವಿಧೆಡೆ ಬಹುತೇಕ ಅಂಗಡಿಮುಂಗಟ್ಟಗಳು ಮುಚ್ಚಿವೆ.

ವಾಹನಸಂಚಾರ ಎಂದಿನಂತೆ ಇದೆ. ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದೆ.

ಬಂದ್ ಗೆ ನೀರಸ ಪ್ರಕ್ರಿಯೆ
ವಿಜಯಪುರ:
ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ. ಕನಾ೯ಟಕ ರಕ್ಷಣಾ ವೇದಿಕೆಯ ಸದಸ್ಯರಿಂದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಕೆಲಕಾಲ ಪ್ರತಿಭಟನೆ ನಡೆದಿದೆ.

ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು, ಸಾಲ ಮನ್ನಾಗೆ ಒತ್ತಾಯಿಸಿದರು.

ಮೆರವಣಿಗೆ
ದಾವಣಗೆರೆ:
ಬಂದ್ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT