‘ಟಾಯ್ಲೆಟ್ ಎಕ್ ಪ್ರೇಮ್ ಕಥಾ’ ಚಿತ್ರದ ಟ್ರೇಲರ್‌ ಬಿಡುಗಡೆ

7

‘ಟಾಯ್ಲೆಟ್ ಎಕ್ ಪ್ರೇಮ್ ಕಥಾ’ ಚಿತ್ರದ ಟ್ರೇಲರ್‌ ಬಿಡುಗಡೆ

Published:
Updated:
‘ಟಾಯ್ಲೆಟ್ ಎಕ್ ಪ್ರೇಮ್ ಕಥಾ’ ಚಿತ್ರದ ಟ್ರೇಲರ್‌ ಬಿಡುಗಡೆ

ಮುಂಬೈ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಅಭಿನಯ ‘ಟಾಯ್ಲೆಟ್ ಎಕ್ ಪ್ರೇಮ್ ಕಥಾ’ ಚಿತ್ರ ಟ್ರೇಲರ್‌ ಅನ್ನು ಭಾನುವಾರ ಬಿಡುಗಡೆ ಮಾಡಿದ್ದಾರೆ.

ಚಿತ್ರದಲ್ಲಿ ‘ಲಿಂಗ ತಾರತಮ್ಯ, ನೈರ್ಮಲ್ಯ ಸಮಸ್ಯೆ, ಅಸಾಂಪ್ರದಾಯಿಕ ನಂಬಿಕೆಗಳ ಕುರಿತು ಪ್ರಮುಖ ಪಾತ್ರವಹಿಸಿಸಲಿದೆ’ ಎಂದು ತಿಳಿಸಿದ್ದಾರೆ.

‘ಸುಧಾರಣೆ ತರುವುದರಲ್ಲಿ ನನಗೆ ಸಂತಸವಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಚಿತ್ರವನ್ನು ಶ್ರೀ ನಾರಾಯಣ್‌ ಸಿಂಗ್‌ ನಿರ್ದೇಶಿಸಿದ್ದಾರೆ. ಮೂರು ನಿಮಿಷವಿರುವ ಟ್ರೇಲರ್‌ ವೀಕ್ಷಕರಲ್ಲಿ ಕುತೂಹಲ ಕೆರಳಿಸುವಂತಿದೆ.

'ಟಾಯ್ಲೆಟ್-ಏಕ್ ಪ್ರೇಮ್ ಕಥಾ' ಚಿತ್ರ ಆಗಸ್ಟ್‌ 11ರಂದು ತರೆ ಕಾಣಲಿದೆ. ಚಿತ್ರದಲ್ಲಿ ನಾಯಕಿ ನಟಿಯಾಗಿ ಭೂಮಿ ಪೆಂಡ್ನೇಕ್ಕರ್‌ ಕಾಣಿಸಿಕೊಳ್ಳಲಿದ್ದಾರೆ.

ಭಾನುವಾರ ಯುಟ್ಯೂಬ್‌ನಲ್ಲಿ ಬಿಡುಗಡೆಯಾದ ಟ್ರೇಲರ್‌ ಈವರೆಗೆ 5 ಲಕ್ಷ 79 ಸಾವಿರ ಮಂದಿ ವೀಕ್ಷಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry