2017ರ ನೀಟ್‌: ಫಲಿತಾಂಶ ಪ್ರಕಟಿಸಲು ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಆದೇಶ

7

2017ರ ನೀಟ್‌: ಫಲಿತಾಂಶ ಪ್ರಕಟಿಸಲು ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಆದೇಶ

Published:
Updated:
2017ರ ನೀಟ್‌: ಫಲಿತಾಂಶ ಪ್ರಕಟಿಸಲು ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಣೆ, ಕೌನ್ಸಿಲಿಂಗ್‌ ಮತ್ತು ಪ್ರವೇಶ ಪ್ರಕ್ರಿಯೆಯನ್ನು ಈ ಮೊದಲು ನಿಗದಿಯಾಗಿದ್ದ ವೇಳಾಪಟ್ಟಿಗೆ ಅನುಗುಣವಾಗಿ ನಡೆಸುವಂತೆ ಸುಪ್ರೀಂ ಕೋರ್ಟ್‌ ಸಂಬಂಧರಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.

ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲವಿತ್ತು ಎಂಬ ಕಾರಣಕ್ಕೆ ವೈದ್ಯಕೀಯ ಮತ್ತು ಬಿಡಿಎಸ್ ಕೋರ್ಸ್‌ಗಳ ನೀಟ್ ಫಲಿತಾಂಶಕ್ಕೆ ಮದ್ರಾಸ್ ಹೈಕೋರ್ಟ್ ಫಲಿತಾಂಶ ಪ್ರಕಟಣೆಗೆ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿದ ಸಿಬಿಎಸ್ಇ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

2017ರ ನೀಟ್‌ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಅರ್ಜಿ ವಿಚಾರಣೆ ನಡೆಸದಿರಲು ಎಲ್ಲ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಸುಮಾರು 12 ಲಕ್ಷ ವಿದ್ಯಾರ್ಥಿಗಳು ನೀಟ್‌ ಪರೀಕ್ಷೆಯನ್ನು ಎದುರಿಸಿದ್ದರು. ಆದರೆ, ಫಲಿತಾಂಶ ಪ್ರಕಟಣೆಗೆ ಮದ್ರಾಸ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಎಸ್‌ಇ ಹಾಗೂ ಇತರೆ ಸಂಸ್ಥೆಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ.ಪಂತ್‌ ಮತ್ತು ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ಪೀಠ ಸೋಮವಾರ ತೀರ್ಪು ನೀಡಿದೆ.

ಇದರಿಂದ ನೀಟ್‌ ಪರೀಕ್ಷಾ ಫಲಿತಾಂಶದ ಕುರಿತು ಉಂಟಾಗಿದ್ದ ಗೊಂದಲಗಳು ನಿವಾರಣೆಯಾಗಿವೆ. ಮದ್ರಾಸ್‌ ಹೈಕೋರ್ಟ್‌ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್‌, ಕೂಡಲೇ ಫಲಿತಾಂಶ ಪ್ರಕಟಿಸುವಂತೆ ಸಿಬಿಎಸ್‌ಇಗೆ ಆದೇಶಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry