ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ

7

ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ

Published:
Updated:
ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ

ಬೆಳಗಾವಿ: ಕೇಂದ್ರ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲು ದೇಶದಾದ್ಯಂತ ಜನಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಚಾರ ಖಾತೆ ರಾಜ್ಯ ಸಚಿವ ರಾಜ್ಯವರ್ಧನಸಿಂಗ್ ರಾಠೋಡ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳ ಬಗೆಹರಿಸಲು ಕೇಂದ್ರ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದರು.

ದೇಶದಲ್ಲಿ ಪ್ರಜಾಪ್ರಭುತ್ವವಿದ್ದು, ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಪತ್ರಿಕಾ, ಮಾಧ್ಯಮ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಲೆ ದೇಶದಲ್ಲಿ ಇದೆ. ಕಾಂಗ್ರೆಸ್ ಹೊರ ತರಲು ಹೊರಟಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಬಗ್ಗೆ ಯಾವುದೇ ಅಭ್ಯಂತರವಿಲ್ಲ. ಕಾನೂನುಬದ್ಧವಾಗಿ ಪತ್ರಿಕೆ ಪ್ರಕಟವಾದರೆ ಕೇಂದ್ರ ಸರ್ಕಾರ ಏಕೆ ಆಕ್ಷೇಪಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry