ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಅವಿಸ್ಮರಣೀಯ: ಗೆಲುವಿಗೆ ವಿರಾಟ್‌ ಕೊಹ್ಲಿ ಮೆಚ್ಚುಗೆ

7

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಅವಿಸ್ಮರಣೀಯ: ಗೆಲುವಿಗೆ ವಿರಾಟ್‌ ಕೊಹ್ಲಿ ಮೆಚ್ಚುಗೆ

Published:
Updated:
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಅವಿಸ್ಮರಣೀಯ: ಗೆಲುವಿಗೆ ವಿರಾಟ್‌ ಕೊಹ್ಲಿ ಮೆಚ್ಚುಗೆ

ಲಂಡನ್‌: 'ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2017ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡ ಆಡಿರುವ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಅವಿಸ್ಮರಣೀಯ’ ಎಂದು ಟೀಂ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಓವಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹತ್ವದ ಪಂದ್ಯದಲ್ಲಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಆಗ್ರಸ್ಥಾನ ಹೊಂದಿರುವ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 8 ವಿಕೆಟ್‌ಗಳಿಂದ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ಪಂದ್ಯದ ಬಳಿಕೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ ‘ಬೌಲಿಂಗ್‌ ಫೀಲ್ಡಿಂಗ್‌ ಎರಡು ವಿಭಾಗಗಳಲ್ಲೂ ತಂಡದ ಪ್ರದರ್ಶನ ಉತ್ತಮವಾಗಿತ್ತು’ ಎಂದಿದ್ದಾರೆ.

'ಪಂದ್ಯದ ಗೆಲುವಿಗೆ ಟಾಸ್‌ ಕೂಡ ನಿರ್ಣಾಯಕ ಪಾತ್ರವಹಿಸಿತ್ತು. ಎದುರಾಳಿ ತಂಡದ ಆಟಗಾರರಿಗೆ ಬೃಹತ್‌ ಮೊತ್ತ ಪೇರಿಸಲು ಅವಕಾ‌ಶ ಇತ್ತು. ಆದರೆ, ನಮ್ಮ ಬೌಲರ್‌ ಅದಕ್ಕೆ ಅನುವು ಮಾಡಿಕೊಡಲಿಲ್ಲ' ಎಂದಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್ ರನ್‌ ಔಟ್‌ ಆಗಿದ್ದು, ಪಂದ್ಯಕ್ಕೆ ತಿರುವು ನೀಡಿತ್ತು ಎಂದು ವಿವರಿಸಿದ್ದಾರೆ.

ಬಾಂಗ್ಲಾ ವಿರುದ್ಧ ಗೆಲ್ಲುವ ವಿಶ್ವಾಸ
ಜೂನ್‌ 15ರಂದು ಬರ್ಮಿಂಗ್‌ ಹ್ಯಾಮ್‌ನಲ್ಲಿ ನಡೆಯಲಿರುವ ಬಾಂಗ್ಲಾದೇಶದ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry