‘ನ್ಯಾಷನಲ್ ಹೆರಾಲ್ಡ್‌’ಗೆ ಮರು ಚಾಲನೆ

7

‘ನ್ಯಾಷನಲ್ ಹೆರಾಲ್ಡ್‌’ಗೆ ಮರು ಚಾಲನೆ

Published:
Updated:
‘ನ್ಯಾಷನಲ್ ಹೆರಾಲ್ಡ್‌’ಗೆ ಮರು ಚಾಲನೆ

ಬೆಂಗಳೂರು: ಬಹು ದಿನಗಳಿಂದ ಸ್ಥಗಿತವಾಗಿದ್ದ ಐತಿಹಾಸಿಕ ಪತ್ರಿಕೆ ಹಾಗೂ ಕಾಂಗ್ರೆಸ್‌ನ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್‌’ ಪತ್ರಿಕೆಯನ್ನು ಕಾಂಗ್ರೆಸ್‌ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿ ಮರು ಬಿಡುಗಡೆ ಮಾಡಿದರು.

ನಗರದಲ್ಲಿ ಪತ್ರಿಕೆಗೆ ಮರು ಚಾಲನೆ ನೀಡಿದ ಬಳಿಕ ಮಾತನಾಡಿದ ರಾಹುಲ್‌ ಗಾಂಧಿ ಅವರು, ರಾಜಕೀಯ ಕಾರಣಗಳಿಂದ ಪತ್ರಿಕೆ ಪ್ರಕಟಣೆ ನಿಂತಿತ್ತು. ಈಗ ಪುನರ್‌ ಆರಂಭವಾಗಿದೆ. ಕೇಂದ್ರ ಸರ್ಕಾರ ಸತ್ಯದ ಪರ ನಿಲ್ಲುವವರನ್ನು ಅಧಿಕಾರಯುತವಾಗಿ ತುಳಿಯುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ ಹೆಚ್ಚು ಶಕ್ತಿಯುತವಾಗಿದ್ದು, ಪತ್ರಿಕೆಯ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ದೇಶಭಕ್ತಿ, ಜಾತ್ಯತೀತತೆಯ ಪ್ರತಿರೂಪವಾಗಿದ್ದ ನ್ಯಾಷನಲ್ ಹೆರಾಲ್ಡ್ ತನ್ನ ಮರುಹುಟ್ಟಿನೊಂದಿಗೆ ಸಾಂವಿಧಾನಿಕ ಆಶಯಗಳನ್ನು ಎತ್ತಿಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ನ್ಯಾನಲ್‌ ಹೆರಾಲ್ಡ್‌ ಪತ್ರಿಕೆಯ ಸುವರ್ಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ರಾಜ್ಯಪಾಲ ವಜುಭಾಯಿ ವಾಲ ಅವರು ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ ಹಾಗೂ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರನ್ನು ಎಚ್‌ಎಎಲ್ ವಿಮಾನನಿಲ್ದಾಣದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry