ಜೂನ್‌ 25–26ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

7

ಜೂನ್‌ 25–26ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

Published:
Updated:
ಜೂನ್‌ 25–26ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಜತೆ ಮಾತುಕತೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಜೂನ್‌ 25–26ರಂದು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಅವರು ಅಮೆರಿಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಈ ಹಿಂದೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದ ವೇಳೆ ತಮ್ಮ ದೇಶಕ್ಕೆ ಆಗಮಿಸುವಂತೆ ಮೋದಿ ಅವರಿಗೆ ಟ್ರಂಪ್ ಆಹ್ವಾನ ನೀಡಿದ್ದರು. ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರು ಮೂರು ಬಾರಿ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.

ಉಭಯ ನಾಯಕರ ಭೇಟಿ ವೇಳೆ ಎಚ್‌1ಬಿ ವೀಸಾ, ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದ ಮತ್ತಿತರ ವಿಷಯಗಳ ಬಗ್ಗೆ ಮಾತುಕತೆ ನಡೆಯುವ ನಿರೀಕ್ಷೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry