'ಪ್ರಧಾನ ಮಂತ್ರಿ ಉಜ್ವಲ' ಯೋಜನೆಗೆ 17 ರಂದು ಹುಬ್ಬಳ್ಳಿಯಲ್ಲಿ ಚಾಲನೆ

7

'ಪ್ರಧಾನ ಮಂತ್ರಿ ಉಜ್ವಲ' ಯೋಜನೆಗೆ 17 ರಂದು ಹುಬ್ಬಳ್ಳಿಯಲ್ಲಿ ಚಾಲನೆ

Published:
Updated:
'ಪ್ರಧಾನ ಮಂತ್ರಿ ಉಜ್ವಲ' ಯೋಜನೆಗೆ 17 ರಂದು ಹುಬ್ಬಳ್ಳಿಯಲ್ಲಿ ಚಾಲನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಪ್ರಧಾನ ಮಂತ್ರಿ ಉಜ್ವಲ' ಉಚಿತ ಅಡುಗೆ ಅನಿಲ ಸಂಪರ್ಕ ಯೋಜನೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಇದೇ ತಿಂಗಳ 17 ರಂದು ಬೆಳಿಗ್ಗೆ 11.30ಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಸುಮಾರು 33 ಲಕ್ಷ ಕುಟುಂಬಗಳಿಗೆ ಈ ಯೋಜನೆಯಡಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಬಳಿಕ ಸಚಿವರು ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುವ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದೂ ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry