ಶಂಕರಮೂರ್ತಿಗೆ ಜೆಡಿಎಸ್ ಬೆಂಬಲ

7

ಶಂಕರಮೂರ್ತಿಗೆ ಜೆಡಿಎಸ್ ಬೆಂಬಲ

Published:
Updated:
ಶಂಕರಮೂರ್ತಿಗೆ ಜೆಡಿಎಸ್ ಬೆಂಬಲ

ಬೆಂಗಳೂರು: ‘ಡಿ.ಎಚ್. ಶಂಕರಮೂರ್ತಿ ಅವರಿಗೆ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದ್ದು, ಅವರೇ ಸಭಾಪತಿ ಸ್ಥಾನದಲ್ಲಿ ಮುಂದುವರಿಯುತ್ತಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಂಕರಮೂರ್ತಿ ಅವರ ಮನೆಯಲ್ಲಿ ಸೋಮವಾರ ರಾತ್ರಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಸಭಾಪತಿ ವಿರುದ್ಧ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ. ಚರ್ಚೆಗೆ ಅವಕಾಶ ದೊರೆತರೆ ಬುಧವಾರವೇ ಅವಿಶ್ವಾಸವನ್ನು ಮತಕ್ಕೆ ಹಾಕುವಂತೆ ಒತ್ತಾಯಿಸಲಾಗುವುದು’ ಎಂದು ಹೇಳಿದರು.

‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಜೊತೆ ಶಂಕರಮೂರ್ತಿ ಈಗಾಗಲೇ ಮಾತನಾಡಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ  ಎಚ್‌.ಡಿ. ಕುಮಾರಸ್ವಾಮಿ ಅವರ ಬಳಿ ನಾನೂ ಮಾತನಾಡಿದ್ದೇನೆ.

ಜೆಡಿಎಸ್‌ನಲ್ಲಿ ಅವರಿಬ್ಬರೇ ನಿರ್ಧಾರ ತೆಗೆದುಕೊಳ್ಳುವ ನಾಯಕರು. ಹೀಗಾಗಿ ಶಂಕರಮೂರ್ತಿ ಅವರೇ ಸಭಾಪತಿಯಾಗಿ ಮುಂದುವರಿಯುತ್ತಾರೆ’ ಎಂದೂ ಈಶ್ವರಪ್ಪ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry