‘ಪ್ಲಾಸ್ಟಿಕ್‌ ಆಹಾರ ಪದಾರ್ಥ ವದಂತಿ’

7

‘ಪ್ಲಾಸ್ಟಿಕ್‌ ಆಹಾರ ಪದಾರ್ಥ ವದಂತಿ’

Published:
Updated:
‘ಪ್ಲಾಸ್ಟಿಕ್‌ ಆಹಾರ ಪದಾರ್ಥ ವದಂತಿ’

ಬೆಂಗಳೂರು: ‘ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್‌ ಆಹಾರ ಪದಾರ್ಥಗಳು ಮಾರಾಟವಾಗುತ್ತಿಲ್ಲ. ಎಲ್ಲೂ ಬಳಕೆ ಆಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ’ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸೋಮವಾರ ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ರಘುನಾಥ ಮಲ್ಕಾಪುರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪದಾರ್ಥಗಳನ್ನು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದಾರೆ. ಸಂಶಯಾಸ್ಪದ ಪದಾರ್ಥಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸುತ್ತಾರೆ.  ಮಾರುಕಟ್ಟೆಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್‌ ಅಕ್ಕಿ, ಸಕ್ಕರೆ, ಮೊಟ್ಟೆ ಪೂರೈಕೆಯಾಗುತ್ತಿದೆ ಎನ್ನುವುದು ವದಂತಿ’ ಎಂದೂ ಅವರು ಸ್ಪಷ್ಟಪಡಿಸಿದರು.

‘ರಾಜ್ಯ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಿದ ಸಕ್ಕರೆ 208, ಅಕ್ಕಿ 140, ಮೊಟ್ಟೆ 8 ಮತ್ತು ರಾಗಿಯ 17 ಆಹಾರ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ವಿಶ್ಲೇಷಿಸಲಾಗಿದೆ. ಯಾವುದೇ ಆಹಾರ ಪದಾರ್ಥ ಪ್ಲಾಸ್ಟಿಕ್‌ನಿಂದ ತಯಾರಿಸಿರುವುದು ವರದಿ ಆಗಿಲ್ಲ’ ಎಂದೂ ಸಚಿವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry