ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗು ಕವಿ ನಾರಾಯಣ ರೆಡ್ಡಿ ನಿಧನ

Last Updated 12 ಜೂನ್ 2017, 19:30 IST
ಅಕ್ಷರ ಗಾತ್ರ

ಹೈದರಾಬಾದ್‌: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ತೆಲುಗು ಕವಿ ಸಿ. ನಾರಾಯಣ ರೆಡ್ಡಿ (80) ಸೋಮವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು  ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

1931 ಜುಲೈ 29ರಂದು ಕರೀಂನಗರ ಜಿಲ್ಲೆಯಲ್ಲಿ  ಜನಿಸಿದ್ದ ಅವರು, ಕವಿತೆ, ಗೀತೆ, ನಾಟಕ, ಪ್ರಬಂಧ, ಗಜಲ್‌, ಪ್ರವಾಸ ಕಥನ, ಸಾಹಿತ್ಯ ವಿಮರ್ಶೆ ಮೊದಲಾದ ಸಾಹಿತ್ಯ ಪ್ರಕಾರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ನಾರಾಯಣ ರೆಡ್ಡಿ ಅವರ ‘ವಿಶ್ವಂಭರ’ ಕೃತಿಗೆ 1988ರಲ್ಲಿ ಜ್ಞಾನಪೀಠ ಪ್ರಶಸ್ತಿ  ಲಭಿಸಿದೆ. 1977ರಲ್ಲಿ ಪದ್ಮಶ್ರೀ, 1992 ರಲ್ಲಿ ಪದ್ಮಭೂಷಣ ಪ್ರಶಸ್ತಿಗಳಿಗೂ ಅವರು ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಆಂಧ್ರ ವಿಶ್ವವಿದ್ಯಾಲಯವು ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್‌ ನೀಡಿದೆ. ಆಧುನಿಕ ತೆಲುಗು ಕವಿತೆಗಳ ಬಗ್ಗೆ ರೆಡ್ಡಿ ಅವರು ರಚಿಸಿರುವ ಸಂಶೋಧನಾ ಕೃತಿ 1967ರಲ್ಲಿ ಪ್ರಕಟಗೊಂಡಿತ್ತು.

ಪ್ರಸಿದ್ಧ ಗೀತರಚನೆಕಾರರಾಗಿದ್ದ ರೆಡ್ಡಿ ಅವರು ಚಲನಚಿತ್ರಗಳಿಗೆ 3,000ಕ್ಕೂ ಹೆಚ್ಚು ಹಾಡುಗಳನ್ನು  ಬರೆದಿದ್ದಾರೆ. ರಾಜ್ಯ ಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿರುವ  ಅವರು ತೆಲಂಗಾಣ ಸಾರಸ್ವತ ಪರಿಷತ್‌ ಅಧ್ಯಕ್ಷರಾಗಿಯೂ  ಕಾರ್ಯ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT