ಸುಸ್ತಿದಾರರ ಪಟ್ಟಿ ಶೀಘ್ರ

7

ಸುಸ್ತಿದಾರರ ಪಟ್ಟಿ ಶೀಘ್ರ

Published:
Updated:
ಸುಸ್ತಿದಾರರ ಪಟ್ಟಿ ಶೀಘ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಸೂಲಾಗದ ಸಾಲಕ್ಕೆ (ಎನ್‌ಪಿಎ) ಸಂಬಂಧಿಸಿದಂತೆ, ಭಾರತೀಯ ರಿಸರ್ವ್‌ ಬ್ಯಾಂಕ್‌ ಶೀಘ್ರದಲ್ಲಿಯೇ ಸುಸ್ತಿದಾರರ ಪಟ್ಟಿ ಬಿಡುಗಡೆ ಮಾಡಲಿದೆ.ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಕಾಯ್ದೆಯಡಿ ‘ಎನ್‌ಪಿಎ’ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಂತಹ ಪಟ್ಟಿ ತಯಾರಿಸುವುದು ಅಗತ್ಯವಾಗಿದೆ.ಬ್ಯಾಂಕ್‌ಗಳ ವಸೂಲಾಗದ ಸಾಲದ ಪ್ರಮಾಣಕ್ಕೆ ಪರಿಹಾರ ಕಂಡುಕೊಳ್ಳಲು ಆರ್‌ಬಿಐಗೆ  ಹೆಚ್ಚು ಅಧಿಕಾರ ನೀಡಲು ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ–1949ಕ್ಕೆ  ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರವು ಕಳೆದ ತಿಂಗಳು ಹೊರಡಿಸಿದೆ.ಸಾಲ ವಸೂಲಾತಿಗೆ ದಿವಾಳಿ  ಪ್ರಕ್ರಿಯೆ ಆರಂಭಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ನಿರ್ದೇಶನ ನೀಡಲು ಸುಗ್ರೀವಾಜ್ಞೆಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ಸಾಲ ವಸೂಲಾತಿಗೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನೂ ನೀಡಲಾಗಿದೆ.‘ಸುಗ್ರೀವಾಜ್ಞೆ ಫಲವಾಗಿ, ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಪ್ರಕ್ರಿಯೆ ಆರಂಭಿಸುವುದಕ್ಕೆ ಪೂರಕವಾಗಿ ಸಾಲಗಾರರ ಪಟ್ಟಿ ಸಿದ್ಧಪಡಿಸಲಾಗುವುದು. ಈ ನಿಟ್ಟಿನಲ್ಲಿ ಆರ್‌ಬಿಐ ಕಾರ್ಯಪ್ರವೃತ್ತವಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಹೇಳಿದ್ದಾರೆ.

ಸೋಮವಾರ ಇಲ್ಲಿ ನಡೆದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಹಣಕಾಸು ಪರಿಸ್ಥಿತಿ  ಪರಾಮರ್ಶೆ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.ವಸೂಲಾಗದ ಸಾಲದ ಪ್ರಮಾಣಕ್ಕೆ ಉಕ್ಕು, ಮೂಲಸೌಕರ್ಯ, ಕೃಷಿ ಮತ್ತು ಜವಳಿ ವಲಯಗಳ ಕೊಡುಗೆ ಗಮನಾರ್ಹವಾಗಿದೆ.ಬ್ಯಾಂಕ್‌ಗಳ ವಿಲೀನ: ‘ಇನ್ನಷ್ಟು ಬ್ಯಾಂಕ್‌ಗಳ ವಿಲೀನ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಇಂದಿನ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry