ಅಜ್ಜಿ ಮನೆಗೆ ರಾಹುಲ್

7

ಅಜ್ಜಿ ಮನೆಗೆ ರಾಹುಲ್

Published:
Updated:
ಅಜ್ಜಿ ಮನೆಗೆ ರಾಹುಲ್

ನವದೆಹಲಿ: ಅಜ್ಜಿಯ ಜೊತೆ ಕಾಲಕಳೆಯುವುದಕ್ಕಾಗಿ ವಿದೇಶಕ್ಕೆ ಹೋಗುತ್ತಿರುವುದಾಗಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

‘ನನ್ನ ಅಜ್ಜಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡುವುದಕ್ಕಾಗಿ ವಿದೇಶಕ್ಕೆ ಹೋಗಲಿದ್ದೇನೆ. ಕೆಲವು ದಿನಗಳ ಕಾಲ ಅವರೊಂದಿಗೆ ಕಾಲ ಕಳೆಯುವುದನ್ನು ನಿರೀಕ್ಷಿಸುತ್ತಿದ್ದೇನೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಆದರೆ, ಅಜ್ಜಿ ಎಲ್ಲಿದ್ದಾರೆ ಎಂಬುದನ್ನು ರಾಹುಲ್‌ ಹೇಳಿಲ್ಲ. ಬಹುಶಃ  ಇಟಲಿಯಲ್ಲಿರುವ ಅವರ ಅಜ್ಜಿ, ಪವೊಲಾ ಮೈನೊ ಮನೆಗೆ ಹೋಗುತ್ತಿರಬಹುದು ಎಂದು ಕಾಂಗ್ರೆಸ್‌  ಪದಾಧಿಕಾರಿಗಳು ಹೇಳಿದ್ದಾರೆ.

ಭದ್ರತೆ ಮತ್ತು ಇತರ ಕಾರಣಗಳಿಗಾಗಿ ಅವರು ಪ್ರಯಾಣಿಸುವ ದಿನಾಂಕವನ್ನು ಬಹಿರಂಗಪಡಿಸಲಾಗಿಲ್ಲ. 10 ದಿನಗಳ ಕಾಲ ಅವರು ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ರಾಷ್ಟ್ರಪತಿ ಚುನಾವಣೆ, ರೈತರ ಹೋರಾಟ ಸೇರಿದಂತೆ ಹಲವು ಪ್ರಮುಖ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಹುಲ್‌ ವಿದೇಶದತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್‌ ಉಪಾಧ್ಯಕ್ಷರ ಹೊಸ ಪ್ರವಾಸದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ.

‘ರಾಹುಲ್‌ ಗಾಂಧಿ ಅವರು ರಜಾ ಸಮಯದ ಮಧ್ಯೆ ಆಗೊಮ್ಮೆ ಈಗೊಮ್ಮೆ ಭಾರತಕ್ಕೆ ಭೇಟಿ ನೀಡುತ್ತಾರೆ’ ಎಂದು ಬಿಜೆಪಿ ವಕ್ತಾರ ಜಿ.ವಿ.ಎಲ್‌ ನರಸಿಂಹ ರಾವ್‌ ಹೇಳಿದ್ದಾರೆ.

ಬಿಜೆಪಿ ಹೇಳಿಕೆಯನ್ನು ಕಾಂಗ್ರೆಸ್‌ ಖಂಡಿಸಿದೆ. ಈ ಬಗ್ಗೆ ವಿವಾದ ಸೃಷ್ಟಿಸುವುದು ಅನಗತ್ಯ ಎಂದು ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry