ವಿಶ್ವ ಏಕದಿನ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಗೆ ಅಗ್ರಸ್ಥಾನ

7

ವಿಶ್ವ ಏಕದಿನ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಗೆ ಅಗ್ರಸ್ಥಾನ

Published:
Updated:
ವಿಶ್ವ ಏಕದಿನ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಗೆ ಅಗ್ರಸ್ಥಾನ

ಲಂಡನ್‌ : ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಮಂಗಳವಾರ ಅಂತರ ರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ ಮನ್‌ಗಳ ನೂತನ ವಿಶ್ವ ಕ್ರಮಾಂಕಪಟ್ಟಿ ಯಲ್ಲಿ ಅಗ್ರಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಗೂ ಮುನ್ನ ಎರಡನೇ ಸ್ಥಾನ ಹೊಂದಿದ್ದ ಕೊಹ್ಲಿ,  ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಔಟಾಗದೆ 76 ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಔಟಾಗದೆ 81ರನ್‌ ಗಳಿಸಿ ಮಿಂಚಿದ್ದರು. ಹೀಗಾಗಿ ಅವರು ಮತ್ತೊಮ್ಮೆ ಅಗ್ರಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಬಲಗೈ ಬ್ಯಾಟ್ಸ್‌ಮನ್‌ ಕೊಹ್ಲಿ ಈ ವರ್ಷದ ಜನವರಿಯಲ್ಲೂ ಮೊದಲ ಸ್ಥಾನಕ್ಕೇರಿದ್ದರು.

ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌  ಎರಡನೇ ಸ್ಥಾನಕ್ಕೇರಿದ್ದು, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್‌ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry