ಬೆಣ್ಣೆತೊರಾ ಜಲಾಶಯದಿಂದ ನೀರು ಬಿಡುಗಡೆ: ಹೆಬ್ಬಾಳ ಸೇತುವೆ ಮುಳುಗಡೆ

7

ಬೆಣ್ಣೆತೊರಾ ಜಲಾಶಯದಿಂದ ನೀರು ಬಿಡುಗಡೆ: ಹೆಬ್ಬಾಳ ಸೇತುವೆ ಮುಳುಗಡೆ

Published:
Updated:
ಬೆಣ್ಣೆತೊರಾ ಜಲಾಶಯದಿಂದ ನೀರು ಬಿಡುಗಡೆ: ಹೆಬ್ಬಾಳ ಸೇತುವೆ ಮುಳುಗಡೆ

ಕಲಬುರ್ಗಿ: ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬೆಣ್ಣೆತೊರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಜಲಾಶಯದಿಂದ 2881 ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ಚಿತ್ತಾಪುರ ತಾಲ್ಲೂಕು ಹೆಬ್ಬಾಳ ಸೇತುವೆ ಬುಧವಾರ ಮುಳುಗಡೆಯಾಗಿದ್ದು, ಜನರ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

ಬೆಣ್ಣೆತೊರಾ ಜಲಾಶಯದ ಒಳ ಹರಿವು 1632 ಕ್ಯೂಸೆಕ್ ಇದ್ದು, ಹೊರ ಹರಿವು 2881 ಕ್ಯೂಸೆಕ್ ಇದೆ.

ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ನದಿಗೆ ಇಳಿಯಬಾರದು ಎಂದು ಜಲಾಶಯದ ಅಧಿಕಾರಿಗಳು ಮಂಗಳವಾರವೇ ಎಚ್ಚರಿಕೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry