ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇಕಡ 7ರ ಬಡ್ಡಿ ದರದಲ್ಲಿ ನೀಡಲಾಗುವ ಅಲ್ಪಾವಧಿ ಬೆಳೆ ಸಾಲ ಸೌಲಭ್ಯ ಮುಂದುವರಿಕೆ

Last Updated 14 ಜೂನ್ 2017, 9:47 IST
ಅಕ್ಷರ ಗಾತ್ರ

ನವದೆಹಲಿ:  ರೈತರಿಗೆ ಶೇಕಡ 7ರ ಬಡ್ಡಿ ದರದಲ್ಲಿ ನೀಡಲಾಗುತ್ತಿರುವ ಅಲ್ಪಾವಧಿ ಬೆಳೆ ಸಾಲ ಸೌಲಭ್ಯವನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿಯೂ(2017–18) ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರದ ಸಬ್ಸಿಡಿಯೊಂದಿಗೆ ಈ ಸಾಲ ಸೌಲಭ್ಯ ಆರಂಭಿಸಲಾಗಿತ್ತು. ಈ ಯೋಜನೆಯಡಿ, ಅವಧಿಗೂ ಮುನ್ನ ಸಾಲ ಮರುಪಾವತಿ ಮಾಡುವ ರೈತರಿಂದ ಶೇಕಡ 4ರ ಬಡ್ಡಿಯಷ್ಟನ್ನೇ ಸ್ವೀಕರಿಸಲಾಗುತ್ತಿದೆ.

‘ಅಲ್ಪಾವಧಿ ಬೆಳೆ ಸಾಲ ಸೌಲಭ್ಯಕ್ಕೆ ಸಬ್ಸಿಡಿ ನೀಡಲು ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 20,339 ಕೋಟಿ ಮೀಸಲಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ₹ 3 ಲಕ್ಷದ ವರೆಗೆ ಅಲ್ಪಾವಧಿ ಬೆಳೆ ಸಾಲ ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT