ರಾಷ್ಟ್ರಪತಿ ಸ್ಥಾನಕ್ಕೆ ಜುಲೈ 17ರಂದು ಚುನಾವಣೆ: ಚುನಾವಣಾ ಆಯೋಗ ಅಧಿಸೂಚನೆ

7

ರಾಷ್ಟ್ರಪತಿ ಸ್ಥಾನಕ್ಕೆ ಜುಲೈ 17ರಂದು ಚುನಾವಣೆ: ಚುನಾವಣಾ ಆಯೋಗ ಅಧಿಸೂಚನೆ

Published:
Updated:
ರಾಷ್ಟ್ರಪತಿ ಸ್ಥಾನಕ್ಕೆ ಜುಲೈ 17ರಂದು ಚುನಾವಣೆ: ಚುನಾವಣಾ ಆಯೋಗ ಅಧಿಸೂಚನೆ

ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ಜುಲೈ 17ರಂದು ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಬುಧವಾರದಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 28ರ ವರೆಗೆ ಅವಕಾಶವಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳು ಪರಸ್ಪರ ಒಮ್ಮತದ ಅಭ್ಯರ್ಥಿಯನ್ನು ರಾಷ್ಟ್ರಪತಿ ಹುದ್ದೆ ಆಯ್ಕೆ ಮಾಡುವ ಕಸರತ್ತು ಮುಂದುವರಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಹಿರಿಯ ಸಚಿವರ ಸಮಿತಿಯೊಂದನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಚಿಸಿದ್ದಾರೆ. ಸಮಿತಿಯಲ್ಲಿ ರಾಜನಾಥ ಸಿಂಗ್, ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಇದ್ದಾರೆ.

ಸಮಿತಿಯು ಒಮ್ಮತದ ಅಭ್ಯರ್ಥಿ ಆಯ್ಕೆಗೆ ವಿವಿಧ ರಾಜಕೀಯ ಪಕ್ಷಗಳ ಜತೆ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.

ಬಿಜೆಪಿ ಮತ್ತು ವಿರೋಧ ಪಕ್ಷಗಳ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆ ನಡೆದರೆ ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಪ್ರಸ್ತುತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry