ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಮಸೂದೆ ಮಂಡನೆ

7

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಮಸೂದೆ ಮಂಡನೆ

Published:
Updated:
ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಮಸೂದೆ ಮಂಡನೆ

ಬೆಂಗಳೂರು: ‘ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಮಸೂದೆ– 2017’ ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಬಳಿಕ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡಬೇಕು. ಈ ಅವಧಿಯಲ್ಲಿ ಸ್ವತಂತ್ರವಾಗಿ ಚಿಕಿತ್ಸೆ ನೀಡಲು ಹಾಗೂ ಔಷಧ ಸೂಚಿಸಲು ಅವರಿಗೆ ತಾತ್ಕಾಲಿಕ ನೋಂದಣಿ ನೀಡಲಾಗುತ್ತದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry