ಜಾನುವಾರು ಮಾರಾಟ ನಿಷೇಧ ನಿಯಮ ಜಾರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

7

ಜಾನುವಾರು ಮಾರಾಟ ನಿಷೇಧ ನಿಯಮ ಜಾರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

Published:
Updated:
ಜಾನುವಾರು ಮಾರಾಟ ನಿಷೇಧ ನಿಯಮ ಜಾರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಮಾಂಸದ ಉದ್ದೇಶಕ್ಕಾಗಿ ಜಾನುವಾರು ಮಾರಾಟ ಮತ್ತು ಖರೀದಿ ಮೇಲೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ವಿವರ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. 

ಗುರುವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ರಜಾ ಕಾಲದ ನ್ಯಾಯಪೀಠ ನ್ಯಾಯಮೂರ್ತಿಗಳಾದ ಆರ್.ಕೆ. ಅಗರ್‌ವಾಲ್‌ ಮತ್ತು ಎಸ್‌.ಕೆ. ಕೌಲ್‌ ಅವರು, ಈ ಸಂಬಂಧ ಕೇಂದ್ರ ಸರ್ಕಾರ ಎರಡು ವಾರಗಳ ಒಳಗಾಗಿ, ಎರಡು ಪ್ರತ್ಯೇಕ ಅರ್ಜಿಗಳಿಗೆ ವಿವರಣೆ ನೀಡಬೇಕು ಎಂದು ಹೇಳಿ ನೋಟಿಸ್‌ ನೀಡಿದ್ದಾರೆ.

ಸುಪ್ರೀಂ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.

ಮಾಂಸದ ಉದ್ದೇಶಕ್ಕಾಗಿ ಜಾನುವಾರು ಮಾರಾಟ ಮತ್ತು ಖರೀದಿ ಮೇಲೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿದ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಈ ಅಧಿಸೂಚನೆಯಿಂದ ಧಾರ್ಮಿಕ ಸ್ವಾತಂತ್ರ್ಯ ಸೇರಿದಂತೆ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ್ದು, ನಿಬಂಧನೆಗಳು ಅಸಂವಿಧಾನಿಕ ಎಂದು ಮನವಿಯಲ್ಲಿ ಹೇಳಿದ್ದಾರೆ.

ಮಾಂಸದ ಉದ್ದೇಶಕ್ಕಾಗಿ ಜಾನುವಾರು ಮಾರಾಟ ಮತ್ತು ಖರೀದಿ ಮೇಲೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಮೇ 26ರಂದು ಅಧಿಸೂಚನೆ ಹೊರಡಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry