ಬಾಗಲಕೋಟೆ: ನಿಂತಿದ್ದ ಲಾರಿಯ ಹಿಂಬದಿಗೆ ಡಿಕ್ಕಿಯೊಡೆದ ಲಾರಿ– ಇಬ್ಬರು ಸ್ಥಳದಲ್ಲೇ ಸಾವು

7

ಬಾಗಲಕೋಟೆ: ನಿಂತಿದ್ದ ಲಾರಿಯ ಹಿಂಬದಿಗೆ ಡಿಕ್ಕಿಯೊಡೆದ ಲಾರಿ– ಇಬ್ಬರು ಸ್ಥಳದಲ್ಲೇ ಸಾವು

Published:
Updated:
ಬಾಗಲಕೋಟೆ: ನಿಂತಿದ್ದ ಲಾರಿಯ ಹಿಂಬದಿಗೆ ಡಿಕ್ಕಿಯೊಡೆದ ಲಾರಿ– ಇಬ್ಬರು ಸ್ಥಳದಲ್ಲೇ ಸಾವು

ಬಾಗಲಕೋಟೆ: ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಮತ್ತೊಂದು ಲಾರಿ ಡಿಕ್ಕಿಯೊಡೆದಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸಂಗ್ರಾಮ ಕ್ರಾಸ್ ಬಳಿ ನಡೆದಿದೆ.

ಬಾಗಲಕೋಟೆ ತಾಲ್ಲೂಕಿನ ಸಂಗಮ ಕ್ರಾಸ್ ಬಳಿ ಬೆಳ್ಳಂಬೆಳಿಗ್ಗೆ ನಾಲ್ಕರ ಸುಮಾರಿಗೆ ಘಟನೆ ನಡೆದಿದ್ದು, ಹಿಂಬದಿಯಿಂದ ಡಿಕ್ಕಿಯೊಡೆದ ಲಾರಿಯ ಚಾಲಕ ಮತ್ತು ಕ್ಲೀನರ್‌ ಮೃತಪಟ್ಟಿದ್ದಾರೆ.

ಮೃತರಲ್ಲಿ ಒಬ್ಬರನ್ನು ಆಂಧ್ರಪ್ರದೇಶದ ಮೆಹಬೂಬ್ ನಗರದ ಕೆ. ನರೇಶ್‌ ರೆಡ್ಡಿ(22) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ಗೊತ್ತಾಗಿಲ್ಲ‌.

ಚಾಲಕ ನಿದ್ರೆಯ ಮಂಪರಿನಲ್ಲಿ ರಸ್ತೆಯ ಪಕ್ಕ ನಿಲ್ಲಿಸಿದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry