ಢಾಕಾ: ಬಾಂಗ್ಲಾದೇಶದ ಈಶಾನ್ಯ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂಭವಿಸಿರುವ ಭೂಕುಸಿತಕ್ಕೆ ಸುಮಾರು 141 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದ್ದು, 4,500ಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

‘ಗುಡ್ಡಗಾಡು ಜಿಲ್ಲೆಯಾದ ರಂಗಮಟಿ ಪ್ರದೇಶದಲ್ಲಿ ನಾಪತ್ತೆಯಾಗಿರುವ ಆರು ಜನರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ’ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಗ್ನಿ ಶಾಮಕ ದಳದ ಉಪ ನಿರ್ದೇಶಕ ಜಸೀಮ್ ಉದ್ದೀನ್ ಅವರು ಹೇಳಿದ್ದಾರೆ.

ಸರ್ಕಾರ ನಿರಾಶ್ರಿತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಹೆಚ್ಚು ಒತ್ತು ಹರಿಸಿದ್ದು, ಕಾರ್ಯಾಚರಣೆ ಭರದಿಂದ ಸಾಗಿದೆ. ಆದರೆ, ಅಪಾಯ ಸಂಭವಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಮಂಗಳವಾರವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರಿಂದ ಕಾರ್ಯಾಚರಣೆಯ ಕುರಿತ ತ್ವರಿತ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.