ರಾಜ್ಯ ಸರ್ಕಾರ ಸ್ಥಳ ನೀಡಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌: ನಿರ್ಮಲಾ ಸೀತಾರಾಮನ್‌

7

ರಾಜ್ಯ ಸರ್ಕಾರ ಸ್ಥಳ ನೀಡಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌: ನಿರ್ಮಲಾ ಸೀತಾರಾಮನ್‌

Published:
Updated:
ರಾಜ್ಯ ಸರ್ಕಾರ ಸ್ಥಳ ನೀಡಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌: ನಿರ್ಮಲಾ ಸೀತಾರಾಮನ್‌

ಚಿಕ್ಕಮಗಳೂರು: ರಾಜ್ಯ ಸರ್ಕಾರ ಜಾಗ ಒದಗಿಸಿದರೆ ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿ ತಿಳಿಸಿದರು.

‘ಈ ಭಾಗದಲ್ಲಿ ಸ್ಪೈಸ್‌ ಪಾರ್ಕ್‌ ಸ್ಥಾಪಿಸಬೇಕು ಎಂದು ಕಾಳುಮೆಣಸು ಬೆಳೆಗಾರರು ಬೇಡಿಕೆ ಇಟ್ಟಿದ್ದಾರೆ. ರಾಜ್ಯ ಸರ್ಕಾರ ಭೂಮಿ ಒದಗಿಸಿ ಪೂರಕ ಸಹಕಾರ ನೀಡಿದರೆ ಒಂದು ತಿಂಗಳೊಳಗೆ ಪಾರ್ಕ್‌ ಸ್ಥಾಪನೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಾರ್ಕ್‌ ಆರಂಭಕ್ಕೆ ಬೇಕಾದ ಸವಲತ್ತುಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ. ಪಾರ್ಕ್‌ ಆರಂಭವಾದರೆ ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry