ಜೆಡಿಎಸ್‌ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

7

ಜೆಡಿಎಸ್‌ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

Published:
Updated:
ಜೆಡಿಎಸ್‌ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅವರ ವಿರುದ್ಧ ಕಾಂಗ್ರೆಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿರುವುದನ್ನು ಹಿನ್ನಡೆ ಅನ್ನಲಾಗದು. ಜೆಡಿಎಸ್‌ನವರು ನಮ್ಮ ಜತೆ ಕೈಜೋಡಿಸುತ್ತಾರೆ ಅಂದುಕೊಂಡಿದ್ದೆವು. ಈ ಬಗ್ಗೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಜತೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮಾತುಕತೆ ನಡೆಸಿದ್ದೆವು. ಆದರೆ, ಕೋಮುವಾದಿಗಳ ಜತೆ ಕೈ ಜೋಡಿಸಲು ಜೆಡಿಎಸ್‌ನವರು ತೀರ್ಮಾನ ಮಾಡಿದರು. ಇದರ ಬದಲು, ಜಾತ್ಯತೀತ ಶಕ್ತಿಗಳ ಜತೆ ಸೇರಲು ಅವರು ತೀರ್ಮಾನ ಮಾಡಬೇಕಿತ್ತು’ ಎಂದು ಸಿದ್ದರಾಮಯ್ಯ ಹೇಳಿದರು.

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಬಳಿಕ ಜೆಡಿಎಸ್‌ನವರನ್ನು ಕಾಂಗ್ರೆಸ್‌ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್‌ ಬೆಂಬಲ ನೀಡದಿರುವುದಕ್ಕೆ ಇದೆಲ್ಲ ಸರಿಯಾದ ಕಾರಣ ಎನ್ನಲಾಗದು. ಜಾತ್ಯತೀತ ಶಕ್ತಿಗಳ ಜತೆ ಕೈಜೋಡಿಸಬೇಕೆಂದು ಜೆಡಿಎಸ್‌ನವರ ಮನಸ್ಸಿನಲ್ಲಿ ಬರದೇ ಹೋದರೆ ನಾವೇನು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದರು.

[Related]

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry