ಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲ; ಸಾಲ ಮನ್ನಾಕ್ಕೆ ಒತ್ತಾಯಿಸಿ ಸತ್ಯಾಗ್ರಹ: ಯಡಿಯೂರಪ್ಪ

7

ಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲ; ಸಾಲ ಮನ್ನಾಕ್ಕೆ ಒತ್ತಾಯಿಸಿ ಸತ್ಯಾಗ್ರಹ: ಯಡಿಯೂರಪ್ಪ

Published:
Updated:
ಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲ; ಸಾಲ ಮನ್ನಾಕ್ಕೆ ಒತ್ತಾಯಿಸಿ ಸತ್ಯಾಗ್ರಹ: ಯಡಿಯೂರಪ್ಪ

ಹಾಸನ: ಮುಂದಿನ ಚುನಾವಣೆಯಲ್ಲಿ ಯಾರ ಜತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. 224 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. ಸಭಾಪತಿ ಆಯ್ಕೆ ವಿಷಯದಲ್ಲಿ ಮಾತ್ರ ಮಾತ್ರ ಜೆಡಿಎಸ್ ಜತೆ ಮೈತ್ರಿ ಎಂದರು.

ಕೇಂದ್ರ ರೈತರ ಸಾಲ ಮನ್ನಾ‌ ಮಾಡಲಿ ಅನ್ನೋದು ಸಿಎಂ ಹಳೇರಾಗ. ಕೂಡಲೇ ರೈತರ ಸಹಕಾರಿ ಸಾಲ ಮನ್ನಾ ಮಾಡಬೇಕು. ಇಲ್ಲವಾದರೆ ಮುಂದಿನ ತಿಂಗಳು 7,8,9ರಂದು ಬೆಂಗಳೂರಿನಲ್ಲಿ ಸತ್ಯಾಗ್ರಹ ನಡೆಸುತ್ತೇವೆ, 10ರಂದು ನಾಲ್ಕು ಲಕ್ಷ ರೈತರನ್ನು ಸೇರಿಸಿ ಸಮಾವೇಶ ನಡೆಸಲಾಗುವುದು. ನಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಹಕಾರಿ ಸಾಲ ಮನ್ನಾ ಮಾಡುತ್ತೇವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ನಿರ್ಧಾರ ಕೇಂದ್ರದ ಮುಂದೆ ಇಲ್ಲ ಎಂದರು.

ಕಪ್ಪು ಬಾವುಟ

ಹಾಸನ ತಾಲ್ಲೂಕಿನ ತಟ್ಟೆಕೆರೆಯಲ್ಲಿ ದಲಿತರು ಸಂಸದ ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry