ಸಾಂಪ್ರದಾಯಿಕ ಎದುರಾಳಿ ಪಾಕ್‌ ಜತೆ ಕದನಕ್ಕೆ ಸಜ್ಜಾದ ಟೀಂ ಇಂಡಿಯಾ: ಐಸಿಸಿ ವಿಡಿಯೊ ವೈರಲ್‌

7

ಸಾಂಪ್ರದಾಯಿಕ ಎದುರಾಳಿ ಪಾಕ್‌ ಜತೆ ಕದನಕ್ಕೆ ಸಜ್ಜಾದ ಟೀಂ ಇಂಡಿಯಾ: ಐಸಿಸಿ ವಿಡಿಯೊ ವೈರಲ್‌

Published:
Updated:
ಸಾಂಪ್ರದಾಯಿಕ ಎದುರಾಳಿ ಪಾಕ್‌ ಜತೆ ಕದನಕ್ಕೆ ಸಜ್ಜಾದ ಟೀಂ ಇಂಡಿಯಾ: ಐಸಿಸಿ ವಿಡಿಯೊ ವೈರಲ್‌

ಲಂಡನ್‌: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ– ಪಾಕ್‌ ತಂಡಗಳು ಗೆಲುವಿಗಾಗಿ ಹೋರಾಡಲಿವೆ.

ಭಾನುವಾರ ಕೆನ್ನಿಂಗ್ಟನ್‌ ಓವಲ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯ ಕ್ರಿಕೆಟ್‌ ಅಭಿಮಾನಿಗಳಲ್ಲಿ ಕುತೂಹಲಕ್ಕೆ ಕಾರಣವಾಗಲಿದೆ.

ಗುರುವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 9 ವಿಕೆಟ್‌ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದೆ.

ಫೈನಲ್‌ ಪಂದ್ಯದಲ್ಲಿ ಭಾರತ–ಪಾಕ್‌ ತಂಡಗಳು ಮುಖಾಮುಖಿಯಾಗಲಿದ್ದು, ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಎರಡು ತಂಡಗಳ ನಡುವಿನ ರೋಚಕ ಕ್ಷಣಗಳು ಹಾಗೂ ಉಭಯ ದೇಶಗಳ ಕ್ರೀಡಾಭಿಮಾನಿಗಳ ಸಂಭ್ರಮಾಚರಣೆಯನ್ನು ಒಳಗೊಂಡ ವಿಡಿಯೊವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದೆ.

ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಫೈನಲ್‌ ಪ್ರವೇಶಿಸಿದ್ದು ಇದೇ ಮೊದಲು. ಆದರೆ ಭಾರತ ನಾಲ್ಕು ಬಾರಿ ಫೈನಲ್‌ ಪ್ರವೇಶಿಸಿದೆ. ಜತೆಗೆ ಎರಡು ಬಾರಿ ಚಾಂಪಿಯನ್‌ ಕೂಡ ಆಗಿದೆ.

ಈ ಬಾರಿ ಲೀಗ್‌ ಹಂತದಲ್ಲಿ ಉಭಯ ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಿದವು. ಈ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್‌ ಸೋತಿತ್ತು. 
ಹಾಲಿ ಚಾಂಪಿಯನ್‌ ಆಗಿರುವ ಭಾರತ ತಂಡಕ್ಕೆ ಪ್ರಶಸ್ತಿ ಉಳಿಸಿಕೊಳ್ಳಲು ಈ ಪಂದ್ಯ ಹೆಚ್ಚು ಮಹತ್ವದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry